Monday, June 15, 2026
spot_imgspot_img
spot_imgspot_img

ಪ್ರಜ್ವಲ್ ರೇವಣ್ಣ ವಿರುದ್ಧ ಅತ್ಯಾಚಾರ ಆರೋಪ ಪ್ರಕರಣ : 2 ಸಾವಿರ ಪುಟಗಳ ಚಾರ್ಜ್​ಶೀಟ್ ಸಲ್ಲಿಕೆ

- Advertisement -
- Advertisement -

ಹಾಸನದಲ್ಲಿ ಪ್ರಜ್ವಲ್ ರೇವಣ್ಣ ವಿರುದ್ಧ ದಾಖಲಾಗಿದ್ದ ಅತ್ಯಾಚಾರ ಕೇಸ್ ನಂತರ ಸಿಐಡಿಗೆ ವರ್ಗಾವಣೆ ಆಗಿತ್ತು. ತನಿಖೆ ಕೈಗೆತ್ತಿಕೊಂಡು ಎಸ್ಐಟಿ ಅಧಿಕಾರಿಗಳು 123 ಸಾಕ್ಷ್ಯಗಳನ್ನು ಸಂಗ್ರಹಿಸಿದ್ದಾರೆ. ಇದೀಗ ಸುಮಾರು 2 ಸಾವಿರ ಪುಟಗಳ ಚಾರ್ಜ್​ಶೀಟ್​ನ್ನು ಜನಪ್ರತಿನಿಧಿಗಳ ವಿಶೇಷ ಕೋರ್ಟ್​ಗೆ ಸಲ್ಲಿಸಲಾಗಿದೆ.

ಅತ್ಯಾಚಾರ ಹಾಗೂ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಂಗ ಬಂಧನದ ಹಿನ್ನೆಲೆಯಲ್ಲಿ ಪ್ರಜ್ವಲ್ ರೇವಣ್ಣ ಪರಪ್ಪನ ಅಗ್ರಹಾರ ಜೈಲು ಸೇರಿದ್ದಾರೆ.

ಪ್ರಜ್ವಲ್ ವಿರುದ್ಧ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸಿರುವ ಎಸ್‌ ಐಟಿ ಅಧಿಕಾರಿಗಳು ಕೋರ್ಟ್ ಗೆ 2000 ಪುಟಗಳ ಚಾರ್ಜ್ ಶೀಟ್ ಸಲ್ಲಿಕೆ ಮಾಡಿದ್ದಾರೆ. 123 ಸಾಕ್ಷ್ಯಗಳನ್ನು ಸಂಗ್ರಹಿಸಿ ದೋಷಾರೋಪ ಪಟ್ಟಿಯಲ್ಲಿ ಉಲ್ಲೇಖಿಸಿದ್ದಾರೆ ಎಂದು ತಿಳಿದುಬಂದಿದೆ.

ಎಸ್‌ ಐಟಿ ತನಿಖಾಧಿಕಾರಿ ಸುಮಾರಾಣಿ ಇಂದು ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಗೆ ಚಾರ್ಜ್ ಶೀಟ್ ಸಲ್ಲಿಕೆ ಮಾಡಿದ್ದಾರೆ. ಮಾಜಿ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಹಾಸನ ಜಿಲ್ಲೆಯ ಹೊಳೆನರಸಿಪುರ ಟೌನ್ ಠಾಣೆಯಲ್ಲಿ ಅತ್ಯಾಚಾರ ಪ್ರಕರಣ ದಾಖಲಾಗಿತ್ತು. ಪ್ರಕರಣದ ತನಿಖೆಯನ್ನು ರಾಜ್ಯ ಸರ್ಕಾರ ಎಸ್‌ ಐಟಿಗೆ ವಹಿಸಿತ್ತು.

- Advertisement -

Related news

error: Content is protected !!