Saturday, June 28, 2025
spot_imgspot_img
spot_imgspot_img

14 ವರ್ಷದ ಬಾಲಕಿಯ ಅತ್ಯಾಚಾರಕ್ಕೆ ಯತ್ನಿಸಿದ್ದ ಯುವಕ ಅರೆಸ್ಟ್!!

- Advertisement -
- Advertisement -

ಲಕ್ನೋ: 14 ವರ್ಷದ ಬಾಲಕಿಯ ಅತ್ಯಾಚಾರಕ್ಕೆ ಯತ್ನಿಸಿದ್ದ 22 ವರ್ಷದ ಯುವಕ ಇದೀಗ ಪೊಲೀಸರ ಅತಿಥಿಯಾಗಿದ್ದಾನೆ.

ಉತ್ತರ ಪ್ರದೇಶದ ಬಂಡ ಜಿಲ್ಲೆಯಲ್ಲಿ ಘಟನೆ ನಡೆದಿದ್ದು, ಬಾಲಕಿ ಕುರಿಗಳನ್ನು ಮೇಯಿಸಲೆಂದು ಮನೆಯ ಪಕ್ಕದಲ್ಲಿದ್ದ ಗುಡ್ಡಕ್ಕೆ ತೆರಳುತ್ತಿದ್ದಾಗ ಯುವಕ ಆಕೆಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ್ದಾನೆಂದು ಪೊಲೀಸ್ ಅಧಿಕಾರಿ ಪ್ರದೀಪ್ ಕುಮಾರ್ ಯಾದವ್ ಸ್ಥಳೀಯ ಮಾಧ್ಯಮಕ್ಕೆ ಮಾಹಿತಿ ನೀಡಿದ್ದಾರೆ.

ಆರೋಪಿಯನ್ನು ಈಗಾಗಲೇ ಬಂಧಿಸಿ ಆತನ ಮೇಲೆ ಪೋಕ್ಸೊ ಕಾಯಿದೆ ಅಡಿ ಪ್ರಕರಣ ದಾಖಲಿಸಲಾಗಿದೆ. ಬಾಲಕಿಯನ್ನು ವೈದ್ಯಕೀಯ ಪರೀಕ್ಷೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿಸಿದ್ದಾರೆ.

- Advertisement -

Related news

error: Content is protected !!