Saturday, July 25, 2026
spot_imgspot_img
spot_imgspot_img

ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಸಂಸದ ಪ್ರಜ್ವಲ್​ ರೇವಣ್ಣ ವಿರುದ್ಧ ಅತ್ಯಾಚಾರ ಕೇಸ್ ದಾಖಲು; ತಂದೆ-ಮಗನಿಗೆ ಬಂಧನದ ಭೀತಿ..!

- Advertisement -
- Advertisement -

ಬೆಂಗಳೂರು: ಹಾಸನ ಅಶ್ಲೀಲ ವಿಡಿಯೋ ಕೇಸಲ್ಲಿ ಜೆಡಿಎಸ್​ ಸಂಸದ ಪ್ರಜ್ವಲ್​ ರೇವಣ್ಣ ವಿರುದ್ಧ ಅತ್ಯಾಚಾರ ಪ್ರಕರಣ ದಾಖಲಾಗಿದೆ. ಕ್ರೈಮ್​ ಇನ್​ವೆಸ್ಟಿಗೇಷನ್​​​ ಡಿಪಾರ್ಟ್​ಮೆಂಟ್​ ಪೊಲೀಸ್​ ಠಾಣೆಯಲ್ಲಿ ಪ್ರಜ್ವಲ್​ ರೇವಣ್ಣ ವಿರುದ್ಧ ಐಪಿಸಿ ಸೆಕ್ಷನ್​​ 376(2), 506, 354(A) , 354(B), 354(C) ಅಡಿಯಲ್ಲಿ ಎಫ್​ಐಆರ್​ ಮಾಡಲಾಗಿದೆ. ಹೀಗಾಗಿ ಪ್ರಜ್ವಲ್​ ರೇವಣ್ಣ ದೊಡ್ಡ ಸಂಕಷ್ಟ ಎದುರಾಗಿದೆ.

ಈಗಾಗಲೇ ಎಸ್​ಐಟಿ ಅಧಿಕಾರಿಗಳು ಹಾಸನ ಅಶ್ಲೀಲ ವಿಡಿಯೋ ಕೇಸ್​ ತನಿಖೆಯನ್ನು ತೀವ್ರಗೊಳಿಸಿದ್ದಾರೆ. ಈ ಸಂಬಂಧ ಹಲವರ ಹೇಳಿಕೆಯನ್ನು ಕೂಡ ದಾಖಲಿಸಿದ್ದಾರೆ. ಇದರ ಮಧ್ಯೆ ಪ್ರಜ್ವಲ್​ ರೇವಣ್ಣ ವಿರುದ್ಧ ಅತ್ಯಾಚಾರ ಕೇಸ್​ ದಾಖಲಾಗಿದ್ದು, ಮಾಜಿ ಸಚಿವ ರೇವಣ್ಣನ ಮಗನಿಗೆ ಜೈಲು ಗ್ಯಾರಂಟಿ ಆಗಿದೆ.

‘ಮೊದಲ ಪ್ರಕರಣದಲ್ಲಿ ರೇವಣ್ಣ ಹಾಗೂ ಪ್ರಜ್ವಲ್ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪವಿತ್ತು. ಇದೀಗ, ಪ್ರಜ್ವಲ್ ವಿರುದ್ಧ ಮಾತ್ರ ಅತ್ಯಾಚಾರ ಪ್ರಕರಣ ದಾಖಲಿಸಿಕೊಳ್ಳಲಾಗಿದೆ’ ಎಂದು ಎಸ್‌ಐಟಿ ಮೂಲಗಳು ಹೇಳಿವೆ. ಈ ಬೆಳವಣಿಗೆಗಳ ಮಧ್ಯೆಯೇ, ಬಂಧನದ ಭೀತಿಯಲ್ಲಿರುವ ಶಾಸಕ ರೇವಣ್ಣ ನಿರೀಕ್ಷಣಾ ಜಾಮೀನು ಕೋರಿ ಕೋರ್ಟ್‌‌‌ಗೆ ಅರ್ಜಿ ಸಲ್ಲಿಸಿದ್ದಾರೆ. ಜರ್ಮನಿಯಲ್ಲಿ ಇದ್ದಾರೆ ಎನ್ನಲಾಗಿದ್ದ ಪ್ರಜ್ವಲ್, ದುಬೈಗೆ ಸ್ಥಳಾಂತರಗೊಂಡಿದ್ದು ಅವರ ಪತ್ತೆಗೆ ಎಸ್‌ಐಟಿ ಬಲೆ ಬೀಸಿದೆ.

ಎಸ್‌ಐಟಿ ತಂಡ ಪ್ರಕರಣದ ಸಂತ್ರಸ್ತೆಯನ್ನು ನ್ಯಾಯಾಧೀಶರ ಮುಂದೆ ಹಾಜರುಪಡಿಸಿತ್ತು. ಸಿಆರ್ಪಿಸಿ 164 ಅನ್ವಯ ನ್ಯಾಯಾಧೀಶರ ಸಮ್ಮುಖದಲ್ಲಿ ಸಂತ್ರಸ್ತೆ ಹೇಳಿಕೆ ದಾಖಲಿಸಿದ್ದಾರೆ. ಗೌಪ್ಯವಾಗಿ ಸಂತ್ರಸ್ತೆ ಹೇಳಿಕೆಯನ್ನು ದಾಖಲು ಮಾಡಲಾಗಿದೆ. ಸಂತ್ರಸ್ತೆ ಘಟನೆ ಕುರಿತು ವಿವರವಾಗಿ ಮಾಹಿತಿ ನೀಡಿದರು ಎಂದು ಮೂಲಗಳು ತಿಳಿಸಿವೆ.

ಬಂಧನ ಭೀತಿಯಲ್ಲಿ ರೇವಣ್ಣ ಈ ನಡುವೆ, ಎಸ್‌ಐಟಿ ವಿಚಾರಣೆಗೆ ಗೈರಾಗಿ ಬಂಧನ ಭೀತಿ ಎದುರಿಸುತ್ತಿರುವ ಆರೋಪಿ ಎಚ್‌.ಡಿ. ರೇವಣ್ಣ ನಿರೀಕ್ಷಣಾ ಜಾಮೀನು ಕೋರಿ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ಮೊರೆ ಹೋಗಿದ್ದಾರೆ. ರೇವಣ್ಣ ಅರ್ಜಿ ಕುರಿತು ತುರ್ತು ವಿಚಾರಣೆ ನಡೆಸಿದ ನ್ಯಾಯಾಲಯ, ಆಕ್ಷೇಪಣೆ ಸಲ್ಲಿಸುವಂತೆ ಎಸ್‌ಐಟಿಗೆ ನೋಟಿಸ್‌ ಜಾರಿಗೊಳಿಸಿ ಶುಕ್ರವಾರಕ್ಕೆ ವಿಚಾರಣೆ ಮುಂದೂಡಿತು.

ರೇವಣ್ಣ ಪರ ಹಾಜರಾಗಿದ್ದ ಹಿರಿಯ ವಕೀಲ ಮೂರ್ತಿ ಡಿ. ನಾಯ್’ ಪ್ರಕರಣದ ತನಿಖೆ ನಡೆಸುತ್ತಿರುವ ಎಸ್‌ಐಟಿ ಅರ್ಜಿದಾರರ ವಿರುದ್ಧ ಅತ್ಯಾಚಾರ ಆರೋಪ ಸೇರ್ಪಡೆಗೊಳಿಸಿದೆ. ಜೊತೆಗೆಗೃಹ ಸಚಿವರು ಆರೋಪಿಗಳನ್ನು ಬಂಧಿಸುವುದಾಗಿ ತಿಳಿಸಿದ್ದಾರೆ. ಹೀಗಾಗಿ, ಅರ್ಜಿದಾರರಿಗೆ ಮಧ್ಯಂತರ ನಿರೀಕ್ಷಣಾ ಜಾಮೀನು ಮಂಜೂರು ಮಾಡಬೇಕು’ ಎಂದು ಮನವಿ ಮಾಡಿದರು.

- Advertisement -

Related news

error: Content is protected !!