Wednesday, June 26, 2024
spot_imgspot_img
spot_imgspot_img

ಬೆಳ್ತಂಗಡಿ: ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ; ಅಪ್ರಾಪ್ತ ಸಹಿತ ಮೂವರು ಅರೆಸ್ಟ್‌

- Advertisement -G L Acharya panikkar
- Advertisement -

ಬೆಳ್ತಂಗಡಿ : ಅಪ್ರಾಪ್ತ ವಯಸ್ಸಿನ ಬಾಲಕಿ ಮೂವರು ಯುವಕರು ಅತ್ಯಾಚಾರ ಎಸಗಿ ಆಕೆ ಆರು ತಿಂಗಳ ಗರ್ಭವತಿಯಾಗಲು ಕಾರಣವಾಗಿರುವ ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ. ಈ ಬಗ್ಗೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಅಪ್ರಾಪ್ತ ಸಹಿತ ಮೂವರ ವಿರುದ್ದ ಗ್ಯಾಂಗ್ ರೇಪ್ ಹಾಗೂ ಪೋಕ್ಸೋ ಅಡಿಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರಕರಣ ಸಂಬಂಧ ಮೂಡಬಿದ್ರೆ ನಿವಾಸಿಗಳಾದ ಮಹಮ್ಮದ್ ಇಕ್ಬಾಲ್(26), ಫಾರೂಕ್(19) ಹಾಗೂ 18 ವರ್ಷ ತೊಂಬದ ಅಪ್ರಾಪ್ತ ಬಾಲಕನನ್ನು ಬಂಧಿಸಲಾಗಿದೆ.

ಇಬ್ಬರು ಆರೋಪಿಗಳನ್ನು ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಇನ್ನು ಅಪ್ರಾಪ್ತ ಬಾಲಕನನ್ನು ಮಂಗಳೂರು ಬಾಲನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.

ಬಾಲಕಿಯನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ವರದಿಯಾಗಿದೆ.

- Advertisement -

Related news

error: Content is protected !!