Monday, June 15, 2026
spot_imgspot_img
spot_imgspot_img

ಉಪ್ಪಿನಂಗಡಿ: ತಂದೆಯಿಂದಲೇ ಅಪ್ರಾಪ್ತ ಮಗಳ ಮೇಲೆ ಅತ್ಯಾಚಾರ; ಪೋಕ್ಸೋ ಕಾಯ್ದೆಯಡಿ ಆರೋಪಿಯ ಬಂಧನ

- Advertisement -
- Advertisement -

ಉಪ್ಪಿನಂಗಡಿ: ತಂದೆಯೇ ತನ್ನ ಅಪ್ರಾಪ್ತ ಮಗಳ ಮೇಲೆ ಅತ್ಯಾಚಾರವೆಸಗಿ ಆಕೆಯನ್ನು ಗರ್ಭಿಣಿಯನ್ನಾಗಿಸಿದ ಕೃತ್ಯ ಗೋಳಿತ್ತೂಟ್ಟು ಗ್ರಾ.ಪಂ. ವ್ಯಾಪ್ತಿಯಲ್ಲಿ ನಡೆದಿದೆ. ಆರೋಪಿಯನ್ನು ಪೋಕ್ಸೋ ಕಾಯ್ದೆಯಡಿ ಬಂಧಿಸಲಾಗಿದೆ.

ಗೋಳಿತೊಟ್ಟು ಗ್ರಾ.ಪಂ. ವ್ಯಾಪ್ತಿಯ ನಿವಾಸಿ ತನ್ನ ಮಗಳ ಮೇಲೆ ಕೆಲವು ತಿಂಗಳುಗಳ ಹಿಂದೆ ಅತ್ಯಾಚಾರ ವೆಸಗಿದ್ದು, ಮಗಳ ಆರೋಗ್ಯದಲ್ಲಿ ಏರುಪೇರಾದಾಗ ತಾಯಿ ಮಗಳನ್ನು ಆ. 16ರಂದು ಆಸ್ಪತ್ರೆಗೆ ಕರೆದು ಕೊಂಡು ಹೋದಾಗ ಮಗಳು ಗರ್ಭಿಣಿಯಾಗಿರುವುದು ಬೆಳಕಿಗೆ ಬಂದಿದೆ.

ಬಳಿಕ ಸಂತ್ರಸ್ತೆ ನೀಡಿದ ದೂರಿನಂತೆ ಪೋಕ್ಸೋ ಕಾಯ್ದೆ ದಾಖಲಿಸಿಕೊಂಡ ಉಪ್ಪಿನಂಗಡಿ ಪೊಲೀಸರು ಆರೋಪಿ ತಂದೆಯನ್ನು ಬಂಧಿಸಿದ್ದಾರೆ.

- Advertisement -

Related news

error: Content is protected !!