Friday, June 5, 2026
spot_imgspot_img
spot_imgspot_img

ಪೊಲೀಸರ ಕ್ಷಿಪ್ರ ಕಾರ್ಯಾಚರಣೆ 15 ಕೋ ಮೌಲ್ಯದ ಗಾಂಜಾ ವಶ..! ರಾಜ್ಯದಲ್ಲೇ ಇದೇ ಮೊದಲ ಬಾರಿಗೆ ಇಷ್ಟು ದೊಡ್ಡ ಪ್ರಮಾಣದ ಗಾಂಜಾ ವಶ

- Advertisement -
- Advertisement -

ಎನ್‌ಸಿಬಿ ಹಾಗೂ ಬೀದರ್ ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸಿ ಮಹಾರಾಷ್ಟ್ರಕ್ಕೆ ಲಾರಿಯಲ್ಲಿ ಸಾಗಿಸುತ್ತಿದ್ದ 15.50 ಕೋಟಿ ರೂ. ಮೌಲ್ಯದ 1,596 ಕೆಜಿ ಗಾಂಜಾವನ್ನು ವಶಕ್ಕೆ ಪಡೆದಿದ್ದಾರೆ.

ಈ ಸಂಬಂಧ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ರಾಜ್ಯದಲ್ಲಿ ಇಷ್ಟು ದೊಡ್ಡ ಪ್ರಮಾಣದಲ್ಲಿ ಗಾಂಜಾ ವಶವಾಗಿರುವುದು ಇದೇ ಮೊದಲು ಎನ್ನಲಾಗಿದೆ. ಲಾರಿಯಲ್ಲಿ ಆಂಧ್ರಪ್ರದೇಶದಿಂದ ಬೀದರ್ ಮೂಲಕ ಮಹಾರಾಷ್ಟ್ರಕ್ಕೆ 1,596 ಕೆ.ಜಿ ಗಾಂಜಾಸಾಗಿಸಲಾಗುತ್ತಿತ್ತು. ಖಚಿತ ಮಾಹಿತಿಯ ಮೇರೆಗೆ ಬೀದರ್ ಜಿಲ್ಲೆಯ ಔರಾದ್ ತಾಲೂಕಿನ ವನಮಾರಪ್ಪಳ್ಳಿ ಚೆಕ್‌ಪೋಸ್ಟ್ ಬಳಿ ಎನ್‌ಸಿಬಿ ಹಾಗೂ ಬೀದರ್ ಪೊಲೀಸರು ದಾಳಿ ಮಾಡಿ ವಶಪಡಿಸಿಕೊಂಡಿದ್ದಾರೆ. ಲಾರಿಯ ಡ್ರೈವರ್, ಕ್ಲೀನರ್‌ನನ್ನು ಬಂಧಿಸಲಾಗಿದೆ.

- Advertisement -

Related news

error: Content is protected !!