Saturday, May 18, 2024
spot_imgspot_img
spot_imgspot_img

ಬಿಪಿಎಲ್, ಎಪಿಎಲ್ ಕಾರ್ಡ್‌ದಾರರಿಗೆ ಗುಡ್‌ನ್ಯೂಸ್‌; ಹೆಸರು ಸೇರ್ಪಡೆ, ತಿದ್ದುಪಡಿಗೆ ಅವಕಾಶ

- Advertisement -G L Acharya panikkar
- Advertisement -
vtv vitla

ಇಂದಿನಿಂದ ಬಿಪಿಎಲ್, ಎಪಿಎಲ್ ಕಾರ್ಡ್‌ದಾರರಿಗೆ ಹೆಸರು ಸೇರ್ಪಡೆ, ತಿದ್ದುಪಡಿಗೆ ಆಹಾರ ಇಲಾಖೆ ಅವಕಾಶ ನೀಡಿದೆ. ಬೆಂಗಳೂರು ಒನ್, ಕರ್ನಾಟಕ ಒನ್, ಗ್ರಾಮ ಒನ್​ ಕೇಂದ್ರಗಳಲ್ಲಿ ಬೆಳಿಗ್ಗೆ 10 ಗಂಟೆಯಿಂದ ಸಂಜೆ 7 ಗಂಟೆವರೆಗೆ ಸರಿಪಡಿಸಿಕೊಳ್ಳಬಹುದಾಗಿದೆ. ಅದನ್ನು ಕೂಡ ಮೂರು ಹಂತಗಳಲ್ಲಿ ವಿವಿಧ ಜಿಲ್ಲೆಗಳಿಗೆ ನಿಗದಿತ ದಿನಾಂಕವನ್ನು ಕೊಡಲಾಗಿದೆ

ಅಕ್ಟೋಬರ್​ 5 ರಿಂದ 7 ರವರೆಗೆ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಿಗೆ ಅವಕಾಶ ನೀಡಲಾಗಿದೆ. ಇನ್ನು 2ನೇ ಹಂತದಲ್ಲಿ ಬೆಳಗಾವಿ, ಬಾಗಲಕೋಟೆ, ಚಾಮರಾಜನಗರ, ಚಿಕ್ಕಮಗಳೂರು, ದಕ್ಷಿಣ ಕನ್ನಡ, ಧಾರವಾಡ, ಗದಗ, ಹಾಸನ, ಹಾವೇರಿ, ಕೊಡಗು, ಮಂಡ್ಯ, ಮೈಸೂರು, ಉಡುಪಿ, ಉತ್ತರ ಕನ್ನಡ, ವಿಜಯಪುರ ಸೇರಿ ಒಟ್ಟು 15 ಜಿಲ್ಲೆಗಳಿಗೆ ಅ.8ರಿಂದ ಅ.10ರವರೆಗೆ BPL ಕಾರ್ಡ್ ತಿದ್ದುಪಡಿಗೆ ಅವಕಾಶ ಕೊಡಲಾಗಿದೆ.

ಇನ್ನು 3ನೇ ಹಂತದಲ್ಲಿ ಕಲಬುರಗಿ, ಬಳ್ಳಾರಿ, ಬೀದರ್, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಕೊಪ್ಪಳ, ರಾಯಚೂರು, ರಾಮನಗರ, ಶಿವಮೊಗ್ಗ, ತುಮಕೂರು, ಯಾದಗಿರಿ, ವಿಜಯನಗರ ಸೇರಿ ಒಟ್ಟು 14 ಜಿಲ್ಲೆಗಳಲ್ಲಿ ಅ.11 ರಿಂದ ಅ.13ರವರೆಗೆ ಅವಕಾಶ ನೀಡಲಾಗಿದೆ. ಇದನ್ನು ಬೆಳಿಗ್ಗೆ 10 ಗಂಟೆಯಿಂದ ಸಂಜೆ 07 ಗಂಟೆಯವರೆಗೆ ತಿದ್ದುಪಡಿಗಳನ್ನು ಸಲ್ಲಿಸಲು ಅವಕಾಶ ನೀಡಲಾಗಿದೆ.

ಕಳೆದ ತಿಂಗಳು ಒಂದೊಂದು ಜಿಲ್ಲೆಗಳಿಗೂ ಸಮಯ ನಿಗದಿ ಪಡಿಸಲಾಗಿತ್ತು. ಈ ತಿಂಗಳು ಎಲ್ಲಾ ಜಿಲ್ಲೆಗಳಲ್ಲೂ ಮೂರು ದಿನ ತಿದ್ದುಪಡಿಗೆ ಅವಕಾಶ ನೀಡಲಾಗಿದೆ. ಈ ಕುರಿತು ಆಹಾರ ಇಲಾಖೆ ಅಧಿಕೃತ ಮಾಹಿತಿ ನೀಡಿದೆ.

ನಿಗದಿಪಡಿಸಿದ ಅವಧಿಯೊಳಗೆ ಕರ್ನಾಟಕ ಒನ್, ಗ್ರಾಮ ಒನ್ ಮತ್ತು ಸೇವಾ ಸಿಂಧು ಕೇಂದ್ರಗಳಲ್ಲಿ ಅರ್ಜಿ ಸಲ್ಲಿಸಬಹುದು ಎಂದು ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಪ್ರಕಟಣೆ ತಿಳಿಸಿದೆ.

- Advertisement -

Related news

error: Content is protected !!