Sunday, July 6, 2025
spot_imgspot_img
spot_imgspot_img

ಜೀವನದ ಯಾತ್ರೆ ಮುಗಿಸಿದ ‘ರವಿ ಬೆಳಗೆರೆ’.

- Advertisement -
- Advertisement -

ಬೆಂಗಳೂರು( ನ. 13) : ಹೃದಯಾಘಾತದಿಂದ ಹಿರಿಯ ಪತ್ರಕರ್ತ ರವಿ ಬೆಳಗೆರೆ ನಿಧನರಾಗಿದ್ದಾರೆ. ಗುರುವಾರ ತಡರಾತ್ರಿ ಹಾಯ್ ಬೆಂಗಳೂರ್ ಕಚೇರಿಯಲ್ಲೇ ಅವರಿಗೆ ಹೃದಯಾಘಾತವಾಗಿದೆ. ಕೂಡಲೆ ಅವರನ್ನು ಅಪೋಲೋ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗಿಲ್ಲ.

ಮಾರ್ಚ್ 15, 1958ರಲ್ಲಿ ಬಳ್ಳಾರಿಯಲ್ಲಿ ಜನನಿಸಿದ ಬೆಳಗೆರೆ ಪತ್ರಿಕಾರಂಗದ ಹಲವು ವಿಭಾಗದಲ್ಲಿ ಕೆಲಸ ಮಾಡಿದವರು.

ಬೆಂಗಳೂರಿನ ಪ್ರಾರ್ಥನಾ ಶಾಲೆಯಲ್ಲಿ ರವಿ ಬೆಳಗೆರೆ ಅಂತಿಮ ದರ್ಶನಕ್ಕೆ ಅವಕಾಶ ಮಾಡಿಕೊಡಲಾಗಿದೆ. ಶುಕ್ರವಾರ ಬೆಳ್ಳಗ್ಗೆ 9 ,ಗಂಟೆಯಿಂದ ರವಿ ಬೆಳಗೆರೆ ಅಂತಿಮ‌ ದರ್ಶನಕ್ಕೆ ಅವಕಾಶ ಮಾಡಿಕೊಡಲಾಗಿದೆ.

ಸರ್ಪ ಸಂಬಂಧ, ಭೀಮಾತೀರದ ಹಂತಕರು, ನೀ ಹಿಂಗ ನೋಡಬೇಡ ನನ್ನ,ಡಿ ಕಂಪನಿ, ರಾಜ್ ಲೀಲಾ ವಿನೋದ ಸೇರಿದಂತೆ ಹಲವು ಕೃತಿಗಳು ಬೆಳಗೆರೆ ಕೊಡುಗೆ.

ಶಿಕ್ಷಣವನ್ನ ಬಳ್ಳಾರಿಯಲ್ಲಿ ಮುಗಿಸಿದ್ದ ರವಿಬೆಳಗೆರೆ ಉಪನ್ಯಾಸಕರಾಗಿ ವೃತ್ತಿ ಆರಂಭಿಸಿದ್ದರು. ನಂತರ ಲಂಕೇಶ್ ಪತ್ರಿಕೆಯಲ್ಲಿ ಕೆಲಸ ಆರಂಭ ಮಾಡಿದರು.

1995 ರಲ್ಲಿ ಹಾಯ್ ಬೆಂಗಳೂರು ವಾರ ಪತ್ರಿಕೆ ಪ್ರಾರಂಭ ಮಾಡುತ್ತಾರೆ. ಕ್ರೈಂ ಡೈರಿ ಕಾರ್ಯಕಮದ ನಿರೂಪಕರಾಗಿದ್ದ ರವಿ ಬೆಳಗೆರೆ ದೊಡ್ಡ ಹೆಸರು ಸಂಪಾದಿಸಿದ್ದರು.
ಯುವ ಮನಸುಗಳಿಗಾಗಿ ಅವರು ಆರಂಭಿಸಿದ್ದ ಓ ಮನಸೆ ಪಾಕ್ಷಿಕ ಸಹ ಜನಮನ್ನಣೆಗೆ ಪಾತ್ರವಾಗಿತ್ತು.
ಕರ್ಮವೀರ, ಕಸ್ತೂರಿ, ಸಂಯುಕ್ತ ಕರ್ನಾಟಕ ಪತ್ರಿಕೆಯಲ್ಲಿ ಕೆಲಸ ಮಾಡಿದ್ದ ರವಿಬೆಳಗೆರೆ ಭಾವನ ಆಡಿಯೋ , ಭಾವನ ಪ್ರಕಾಶನ , ಪ್ರರ್ಥಾನ ಶಾಲೆಯ ಸಂಸ್ಥಾಪಕರು .
ಕಿರುತೆರೆಯಲ್ಲಿಯೂ ಬೆಳಗೆರೆ ಕಾಣಿಸಿಕೊಂಡಿದ್ದು ಅವರ ನಿರೂಪಣೆ ಮೆಚ್ಚುಗೆಗೆ ಪಾತ್ರವಾಗಿತ್ತು. ಬಿಗ್ ಬಾಸ್ ನ ಕೊನೆಯ ಸೀಸನ್ ನಲ್ಲಿಯೂ ಬೆಳಗೆರೆ ಭಾಗವಹಿಸಿದ್ದರು.

- Advertisement -

Related news

error: Content is protected !!