Wednesday, July 22, 2026
spot_imgspot_img
spot_imgspot_img

ಮತದಾನದ ಹೊತ್ತಲ್ಲೇ ಬಂಗಾಳದಲ್ಲಿ ಕಚ್ಚಾ ಬಾಂಬ್ ದಾಳಿ; ಹಲವರಿಗೆ ಗಾಯ

- Advertisement -
- Advertisement -

ಕೋಲ್ಕತ್ತಾ: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯ ಮೊದಲ ಹಂತಕ್ಕೆ ಇಂದು ಮತದಾನ ನಡೆಯುತ್ತಿದೆ. ಈ ಹೊತ್ತಿನಲ್ಲೇ ಆತಂಕಕಾರಿ ಘಟನೆಯೊಂದು ನಡೆದಿದೆ.

ಮತದಾನ ನಡೆಯುತ್ತಿದ್ದ ಮುರ್ಷಿದಾಬಾದ್‌ ಜಿಲ್ಲೆಯಲ್ಲಿ ಕೆಲವು ಅಪರಿಚಿತ ವ್ಯಕ್ತಿಗಳು ಕಚ್ಚಾ ಬಾಂಬ್‌ದಾಳಿ ನಡೆಸಿದ್ದಾರೆ. ಜಿಲ್ಲೆಯ ನೌಡಾದಲ್ಲಿ ಘಟನೆ ನಡೆದಿದ್ದು, ಹಲವರು ಗಾಯಗೊಂಡಿದ್ದಾರೆ. ಇದು ಸ್ಥಳೀಯರಲ್ಲಿ ಭೀತಿ ಹೆಚ್ಚಿಸಿದೆ.

ಕಚ್ಚಾ ಬಾಂಬ್‌ ದಾಳಿಯ ಬಳಿಕ ಹಿಂಸಾಚಾರ ಪೀಡಿತವಾಗಿರುವ ಮುರ್ಷಿದಾಬಾದ್‌ ಜಿಲ್ಲೆಯಲ್ಲಿ ಭದ್ರತೆ ಹೆಚ್ಚಿಸಲಾಗಿದೆ.

ಕಳೆದ ತಿಂಗಳು, ಜಿಲ್ಲೆಯ ಜಂಗಿಪುರ ಮತ್ತು ರಘುನಾಥಗಂಜ್ ಪ್ರದೇಶಗಳಲ್ಲಿ ಎರಡು ಗುಂಪುಗಳ ನಡುವೆ ಭಾರೀ ಘರ್ಷಣೆ ನಡೆದಿತ್ತು. ಇದರಿಂದಾಗಿ ಅಧಿಕಾರಿಗಳು ನಿಷೇಧಾಜ್ಞೆ ಹೊರಡಿಸಿ 30 ಜನರನ್ನ ಬಂಧಿಸಲಾಗಿತ್ತು ಎಂದು ವರದಿ ಮೂಲಕ ತಿಳಿದು ಬಂದಿದೆ.

- Advertisement -

Related news

error: Content is protected !!