Saturday, June 28, 2025
spot_imgspot_img
spot_imgspot_img

ಬಡ್ಡಿದರ 25 ಅಂಕ ಇಳಿಸಿದ ಆರ್​​ಬಿಐ- ರಿಪೋ ದರ ಶೇ. 6ಕ್ಕೆ ಇಳಿಕೆ

- Advertisement -
- Advertisement -

ನವದೆಹಲಿ: ನಿರೀಕ್ಷೆಯಂತೆ ಭಾರತೀಯ ರಿಸರ್ವ್ ಬ್ಯಾಂಕ್ ತನ್ನ ರಿಪೋ ದರಗಳನ್ನು 25 ಮೂಲಾಂಕಗಳಷ್ಟು ಕಡಿತಗೊಳಿಸಿದೆ. ಮೊನ್ನೆ ಮತ್ತು ನಿನ್ನೆ ನಡೆದ ಆರ್​​ಬಿಐ ಮಾನಿಟರಿ ಪಾಲಿಸಿ ಕಮಿಟಿ ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ.

ಇಂದು ಬೆಳಗ್ಗೆ 10 ಗಂಟೆಗೆ ಸುದ್ದಿಗೋಷ್ಠಿ ನಡೆಸಿದ ಆರ್​​ಬಿಐ ಗವರ್ನರ್ ಸಂಜಯ್ ಮಲ್ಹೋತ್ರಾ ಅವರು ಕಮಿಟಿ ನಿರ್ಧಾರದ ಬಗ್ಗೆ ತಿಳಿಸಿದ ಅವರು, ರಿಪೋ ದರವನ್ನು ಶೇ. 6.25ರಿಂದ ಶೇ 6ಕ್ಕೆ ಇಳಿಸಿರುವುದನ್ನು ತಿಳಿಸಿದರು.

ಆರ್​​ಬಿಐನಿಂದ ಇದು ಸತತ ಎರಡನೇ ರಿಪೋ ದರ ಇಳಿಕೆ ಆಗಿದೆ. ಫೆಬ್ರುವರಿಯಲ್ಲಿ ನಡೆದ ಎಂಪಿಸಿ ಸಭೆಯಲ್ಲೂ 25 ಮೂಲಾಂಕಗಳಷ್ಟು ಬಡ್ಡಿದರವನ್ನು ಇಳಿಸಲಾಗಿತ್ತು. ಈಗ ಮತ್ತೊಮ್ಮೆ ಕಡಿತಗೊಳಿಸುವ ನಿರ್ಧಾರ ತೆಗೆದುಕೊಳ್ಳಲಾಗಿದೆ.

ರಿಪೋ ರೇಟ್ ಎಂದರೆ ರೀಪರ್ಚೇಸ್ ಅಗ್ರೀಮೆಂಟ್ ರೇಟ್ ಎಂದಿದೆ. ಇಲ್ಲಿ ಬ್ಯಾಂಕುಗಳಿಗೆ ಫಂಡಿಂಗ್ ಅವಶ್ಯಕತೆ ಬಿದ್ದಾಗ ಅವರು ಸರ್ಕಾರಿ ಬಾಂಡ್​​ಗಳನ್ನು ಆರ್​​ಬಿಐನಲ್ಲಿ ಅಡವಿಟ್ಟು ಸಾಲ ಪಡೆಯಬಹುದು. ಆದರೆ, ಅಡವಿಡಲಾದ ಬಾಂಡ್ ಅಥವಾ ಸೆಕ್ಯೂರಿಟಿಗಳನ್ನು ಪೂರ್ವನಿಗದಿತ ದರಕ್ಕೆ ಮರುಖರೀದಿ ಮಾಡಲಾಗುವುದೆಂದು ಒಪ್ಪಂದ ಮಾಡಿಕೊಳ್ಳಲಾಗುತ್ತದೆ. ಅದಕ್ಕೆ ರೀಪರ್ಚೇಸ್ ಅಗ್ರೀಮೆಂಟ್ ರೇಟ್ ಎಂದು ಕರೆಯುವುದು.

- Advertisement -

Related news

error: Content is protected !!