Sunday, April 28, 2024
spot_imgspot_img
spot_imgspot_img

ಉದ್ಘಾಟನಾ ಪಂದ್ಯದಲ್ಲೇ ಆರ್‌ಸಿಬಿಗೆ ಸೋಲು

- Advertisement -G L Acharya panikkar
- Advertisement -

ಚೆನ್ನೈನ ಎಂಎ ಚಿದಂಬರಂ ಸ್ಟೇಡಿಯಂನಲ್ಲಿ ನಡೆದ 17ನೇ ಆವೃತ್ತಿಯ ಮೊದಲ ಪಂದ್ಯದಲ್ಲಿ ಆತಿಥೇಯ ಚೆನ್ನೈ 6 ವಿಕೆಟ್‌ಗಳಿಂದ ಬೆಂಗಳೂರು ತಂಡವನ್ನು ಸೋಲಿಸಿ ಲೀಗ್​ನಲ್ಲಿ ಗೆಲುವಿನ ಶುಭಾರಂಭ ಮಾಡಿದೆ.

ಟಾಸ್‌ ಗೆದ್ದು ಮೊದಲು ಬ್ಯಾಟಿಂಗ್‌ ಮಾಡಿದ ಆರ್‌ಸಿಬಿ (RCB) 173 ರನ್‌ ಗಳಿತ್ತು. 174 ರನ್‌ಗಳ ಗುರಿ ಬೆನ್ನತ್ತಿದ ಚೆನ್ನೈ ಸೂಪರ್‌‌ ಕಿಂಗ್ಸ್‌ ತಂಡ 18.4 ಓವರ್‌ಗಳಲ್ಲಿ 176 ರನ್‌ ಬಾರಿ 17ನೇ ಆವೃತ್ತಿಯಲ್ಲಿ ಗೆಲುವಿನ ಖಾತೆ ತೆರೆದಿದೆ.

ಮೊದಲು ಬ್ಯಾಟಿಂಗ್‌ ಮಾಡಿದ ಆರ್‌ಸಿಬಿ 20 ಓವರ್‌ಗಳಲ್ಲಿ 173 ರನ್‌ ಬಾರಿಸಿತ್ತು. ಆರ್‌ಸಿಬಿ ಪರ ನಾಯಕ ಫಾಫ್‌ ಡು ಪ್ಲೆಸಿಸ್‌ ಆರಂಭದಲ್ಲೇ ಸ್ಫೋಟಕ ಇನ್ನಿಂಗ್ಸ್‌ ಕಟ್ಟಲು ಮುಂದಾದರು. ಮೊದಲ ವಿಕೆಟ್‌ಗೆ ಕೊಹ್ಲಿ ಹಾಗೂ ಡುಪ್ಲೆಸಿಸ್‌ ಜೋಡಿ 27 ಎಸೆತಗಳಲ್ಲಿ 41 ರನ್‌ಗಳ ಜೊತೆಯಾಟ ನೀಡಿತ್ತು. ಆದ್ರೆ ಡುಪ್ಲೆಸಿಸ್‌ 23 ಎಸೆತಗಳಲ್ಲಿ 35 ರನ್‌ (8 ಬೌಂಡರಿ) ಬಾರಿಸಿ ಔಟಾಗುತ್ತಿದ್ದಂತೆ, ಒಂದೊಂದೇ ವಿಕೆಟ್‌ ಬೀಳಲಾರಂಭಿಸಿದವು. ಮುಂದಿನ 37 ರನ್‌ ಗಳಿಸುವಷ್ಟರಲ್ಲಿ ಅಗ್ರ ಕ್ರಮಾಂಕದ ಐದು ಬ್ಯಾಟರ್‌ಗಳನ್ನ ಕಳೆದುಕೊಂಡು ಸಂಕಷ್ಟಕ್ಕೀಡಾಯಿತು.

ಮಧ್ಯಮ ಕ್ರಮಾಂಕದಲ್ಲಿ ಉತ್ತಮ ಇನ್ನೀಂಗ್ಸ್‌ ಕಟ್ಟಿದ ದಿನೇಶ್‌ ಕಾರ್ತಿಕ್‌ ಮತ್ತು ಅನೂಜ್‌ ರಾವತ್‌ ಜೋಡಿ ಉತ್ತಮ ಇನ್ನಿಂಗ್ಸ್‌ ಕಟ್ಟುವಲ್ಲಿ ಯಶಸ್ವಿಯಾದರು. 50 ಎಸೆತಗಳಲ್ಲಿ ಈ ಜೋಡಿ 95 ರನ್‌ ಬಾರಿಸುವ ಮೂಲಕ ತಂಡದ ಮೊತ್ತ 170 ರನ್‌ ಗಳ ಗಡಿ ದಾಟುವಂತೆ ಮಾಡಿತು. ಆರ್‌ಸಿಬಿ ಪರ ಅನೂಜ್‌ ರಾವತ್‌ 48 ರನ್‌ (25 ಎಸೆತ, 4 ಬೌಂಡರಿ, 3 ಸಿಕ್ಸರ್‌), ದಿನೇಶ್‌ ಕಾರ್ತಿಕ್‌ 38 ರನ್‌ (26 ಎಸೆತ, 3 ಬೌಂಡರಿ, 2 ಸಿಕ್ಸರ್‌) ಗಳಿಸಿದ್ರೆ, ಡುಪ್ಲೆಸಿಸ್‌ 35 ರನ್‌, ಕೊಹ್ಲಿ 21 ರನ್‌, ಕ್ಯಾಮರೂನ್‌ ಗ್ರೀನ್‌ 18 ರನ್‌ ಗಳಿಸಿದರು. ಹೆಚ್ಚುವರಿ 13 ರನ್‌ ತಂಡಕ್ಕೆ ಸೇರ್ಪಡೆಯಾಯಿತು.

ಚೆನ್ನೈ ಸೂಪರ್‌ ಕಿಂಗ್ಸ್‌ ಪರ ಮುಸ್ತಫಿಜುರ್ ರೆಹಮಾನ್ 4 ಓವರ್‌ಗಳಲ್ಲಿ 9 ರನ್‌ ಬಿಟ್ಟುಕೊಟ್ಟು 4 ವಿಕೆಟ್‌ ಕಿತ್ತರೆ, ದೀಪಕ್‌ ಚಹಾರ್‌ 1 ವಿಕೆಟ್‌ಗೆ ತೃಪ್ತಿಪಟ್ಟುಕೊಂಡರು.

- Advertisement -

Related news

error: Content is protected !!