


ವಡೋದರಾ:2026ರ ಮಹಿಳಾ ಪ್ರೀಮಿಯರ್ ಲೀಗ್ ಫೈನಲ್ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು, ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು ರೋಚಕವಾಗಿ ಸೋಲಿಸಿ ಎರಡನೇ ಬಾರಿಗೆ ಚಾಂಪಿಯನ್ ಪಟ್ಟ ಅಲಂಕರಿಸಿದೆ. ವಡೋದರಾದ ಕೋಟಂಬಿ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ, ಡೆಲ್ಲಿ ಕ್ಯಾಪಿಟಲ್ಸ್ 203 ರನ್ ಗಳಿಸಿತು. ಆರ್ಸಿಬಿ ಕೊನೆಯ ಓವರ್ನಲ್ಲಿ ಗುರಿ ತಲುಪಿ ಭರ್ಜರಿ ಗೆಲುವು ಸಾಧಿಸಿತು.
ಇಂಡಿಯನ್ ಪ್ರೀಮಿಯರ್‌ಲೀಗ್‌ನಲ್ಲಿ 17 ವರ್ಷಗಳ ಕಾಲ ಟ್ರೋಫಿಗಾಗಿ ಸೆಣಸಾಡಿದ್ದ ಆರ್‌ಸಿಬಿ ಪುರುಷರ ತಂಡ ಕಳೆದ ವರ್ಷ ತನ್ನ 18ನೇ ಆವೃತ್ತಿಯಲ್ಲಿ ಟ್ರೋಫಿಗೆ ಮುತ್ತಿಟ್ಟಿತ್ತು. ಅದರ ಹಿಂದಿನ ವರ್ಷವೇ ಆರ್‌ಸಿಬಿ ಮಹಿಳಾ ತಂಡ ತನ್ನ 2ನೇ ಆವೃತ್ತಿಯಲ್ಲೇ ಟ್ರೋಫಿ ಗೆದ್ದು ಮಾದರಿಯಾಗಿತ್ತು.
ಪುರುಷರ ತಂಡವನ್ನ ಪ್ರೋತ್ಸಾಹಿಸುತ್ತಾ ಬರುತ್ತಿದ್ದ ಅಭಿಮಾನಿಗಳೂ ಮಹಿಳಾ ತಂಡದ ಗೆಲುವನ್ನ ಹೆಮ್ಮೆಯಿಂದ ಕೊಂಡಾಡಿದರು. ಕೊನೆಯ ರನ್ ಸಿಡಿಸುತ್ತಿದ್ದಂತೆ ಅಭಿಮಾನಿಗಳು ಮಹಿಳಾ ಮಣಿಗಳು ಮೈದಾನದಲ್ಲೇ ಕುಣಿದು ಕುಪ್ಪಳಿಸಿದರು. ಆರ್‌ಸಿಬಿ ಪರ ಹರ್ಷೋದ್ಘಾರ ಕೂಗುತ್ತಾ ಗೆಲುವಿನ ಕೇಕೆ ಹಾಕಿದರು. ಆದ್ರೆ ಕಳೆದ ಮೂರು ಆವೃತ್ತಿಗಳಲ್ಲೂ ಫೈನಲ್‌ನಲ್ಲಿ ಸೋತಿದ್ದ ಡೆಲ್ಲಿ ಕ್ಯಾಪಿಟಲ್ಸ್ ಸತತ 4ನೇ ಬಾರಿಯೂ ರನ್ನರ್ ಅಪ್ ಪ್ರಶಸ್ತಿಗೆ ತೃಪ್ತಿಪಟ್ಟುಕೊಂಡಿತು.








