Wednesday, July 22, 2026
spot_imgspot_img
spot_imgspot_img

ಇಂದು ಸಂಜೆ ಬೆಂಗಳೂರಿನಲ್ಲಿ ಆರ್‌ಸಿಬಿಯ ವಿಕ್ಟರಿ ಪರೇಡ್

- Advertisement -
- Advertisement -

ಬೆಂಗಳೂರು: ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್-18 ರಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಚಾಂಪಿಯನ್ ಪಟ್ಟಕ್ಕೆ ಏರಿದೆ. ಅಹಮದಾಬಾದ್‌ನಲ್ಲಿ ನಡೆದ ಫೈನಲ್ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ವಿರುದ್ಧ 6 ವಿಕೆಟ್‌ಗಳ ಜಯ ಸಾಧಿಸಿ ಆರ್‌ಸಿಬಿ ಪಡೆ ಚೊಚ್ಚಲ ಬಾರಿ ಟ್ರೋಫಿ ಎತ್ತಿ ಹಿಡಿದು 18 ವರ್ಷಗಳ ಕನಸನ್ನು ನನಸಾಗಿಸಿಕೊಂಡಿದೆ. ಇದೀಗ ವಿಜಯದ ಬೆನ್ನಲ್ಲೇ ಇಂದು ಸಂಜೆ ಬೆಂಗಳೂರಿನಲ್ಲಿ ಆರ್‌ಸಿಬಿಯ ವಿಕ್ಟರಿ ಪರೇಡ್ ನಡೆಯಲಿದೆ.

ಈ ವಿಚಾರವನ್ನು ಅಧಿಕೃತವಾಗಿ ಆರ್‌ಸಿಬಿ ತಿಳಿಸಿದ್ದು, ಇಂದು ಮಧ್ಯಾಹ್ನ 3:30ಕ್ಕೆ ವಿಧಾನಸೌಧದಿಂದ ವಿಜಯೋತ್ಸವ ಮೆರವಣಿಗೆ ಆರಂಭಗೊಳ್ಳಲಿದ್ದು ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಕೊನೆಯಾಗಲಿದೆ. ಈ ಬಗ್ಗೆ ಶೀಘ್ರವೇ ಮತ್ತಷ್ಟು ಮಾಹಿತಿಯನ್ನು ನೀಡಲಾಗುವುದು ಎಂದು ಆರ್‌ಸಿಬಿ ಹೇಳಿದೆ.

ಫೈನಲ್ ಪಂದ್ಯ ಗೆದ್ದ ಬಳಿಕ ವಿರಾಟ್ ಕೊಹ್ಲಿ ಬೆಂಗಳೂರಿನಲ್ಲಿ ವಿಕ್ಟರಿ ಪರೇಡ್ ನಡೆಸಲಾಗುವುದು ಎಂದು ತಿಳಿಸಿದ್ದರು. ಇದೀಗ ಈ ವಿಚಾರವನ್ನು ಆರ್‌ಸಿಬಿ ಅಧಿಕೃತವಾಗಿ ತಿಳಿಸಿದೆ.

“ಬೆಂಗಳೂರಿನಲ್ಲಿ ಆರ್‌ಸಿಬಿಯ ವಿಕ್ಟರಿ ಪರೇಡ್ ನಡೆಯಲಿದೆ. ಈ ಕಿರೀಟ ನಿಮಗಾಗಿ. 12ನೇ ಮ್ಯಾನ್ ಆರ್ಮಿ. ಪ್ರತಿ ವರ್ಷ, ಪ್ರತಿ ಹರ್ಷೋದ್ಗಾರ, ಪ್ರತಿ ಕಣ್ಣೀರಿಗೆ” ಎಂದು ಆರ್‌ಸಿಬಿ ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿದೆ.

- Advertisement -

Related news

error: Content is protected !!