Thursday, July 23, 2026
spot_imgspot_img
spot_imgspot_img

ರಾಜ್ಯದ ಎಲ್ಲಾ ಶಾಲೆಗಳಲ್ಲಿ ನ್ಯೂಸ್ ಪೇಪರ್ ಓದುವುದು ಇನ್ನು ಕಡ್ಡಾಯ

- Advertisement -
- Advertisement -

ಸಾರ್ವಜನಿಕ ಶಿಕ್ಷಣ ಇಲಾಖೆ ಮಹತ್ವದ ಆದೇಶ

ಬೆಂಗಳೂರು: ಮಕ್ಕಳಲ್ಲಿ ಸಾಮಾನ್ಯ ಜ್ಞಾನ ಹೆಚ್ಚಿಸಲು ಮತ್ತು ಅವರನ್ನು ಇತ್ತೀಚಿನ ಸುದ್ದಿಗಳ ಬಗ್ಗೆ ತಿಳಿದುಕೊಳ್ಳುವಂತೆ ಮಾಡಲು, ಸಾರ್ವಜನಿಕ ಶಿಕ್ಷಣ ಇಲಾಖೆಯು ರಾಜ್ಯದ ಎಲ್ಲಾ ಶಾಲೆಗಳಲ್ಲಿ ನ್ಯೂಸ್ ಪೇಪರ್ ಓದುವುದನ್ನು ಕಡ್ಡಾಯಗೊಳಿಸಿದೆ. ಈ ಕುರಿತು ಇಲಾಖೆಯು ಅಧಿಕೃತ ಸುತ್ತೋಲೆಯನ್ನು ಹೊರಡಿಸಿದೆ.

ಪ್ರಾರ್ಥನೆ ಮುಗಿದ ತಕ್ಷಣ, ಪ್ರತಿದಿನ 10 ರಿಂದ 15 ನಿಮಿಷಗಳ ಕಾಲ ದಿನಪತ್ರಿಕೆಗಳನ್ನು ಓದಿಸುವುದು ಕಡ್ಡಾಯವಾಗಿದೆ. ಈ ನಿಯಮವು ರಾಜ್ಯದ ಸರ್ಕಾರಿ, ಅನುದಾನಿತ, ಖಾಸಗಿ ಮತ್ತು ವಸತಿ ಶಾಲೆಗಳು ಸೇರಿದಂತೆ ಎಲ್ಲಾ ರೀತಿಯ ಶಾಲೆಗಳಿಗೂ ಅನ್ವಯವಾಗುತ್ತದೆ. ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗವು ಶಾಲೆಗಳಲ್ಲಿ ಪತ್ರಿಕೆ ಓದುವುದನ್ನು ಕಡ್ಡಾಯಗೊಳಿಸುವಂತೆ ಸಾರ್ವಜನಿಕ ಶಿಕ್ಷಣ ಇಲಾಖೆಗೆ ಮನವಿ ಮಾಡಿತ್ತು. ಆಯೋಗದ ಮನವಿಗೆ ಸ್ಪಂದಿಸಿದ ಶಿಕ್ಷಣ ಇಲಾಖೆಯು, ಈ ಮಹತ್ವದ ನಿರ್ಧಾರವನ್ನು ತೆಗೆದುಕೊಂಡು ಆದೇಶ ಹೊರಡಿಸಿದೆ.

ಈಗಾಗಲೇ ಹಲವು ಶಾಲೆಗಳಲ್ಲಿ ಪ್ರಾರ್ಥನೆಯ ಸಮಯದಲ್ಲಿ ನ್ಯೂಸ್ ಪೇಪರ್ ಓದಿಸುವ ಅಭ್ಯಾಸವಿತ್ತು. ಆದರೆ, ಇನ್ನು ಮುಂದೆ ಪ್ರಾರ್ಥನೆಯ ನಂತರದ 10-15 ನಿಮಿಷಗಳನ್ನು ಪ್ರತ್ಯೇಕವಾಗಿ ಪತ್ರಿಕೆ ಓದುವುದಕ್ಕಾಗಿಯೇ ಮೀಸಲಿಡಬೇಕು ಎಂದು ಶಿಕ್ಷಣ ಇಲಾಖೆಯ ಸುತ್ತೋಲೆಯಲ್ಲಿ ಸ್ಪಷ್ಟಪಡಿಸಿದೆ. ಈ ನಿರ್ಧಾರವು ಮಕ್ಕಳ ಸರ್ವಾಂಗೀಣ ಅಭಿವೃದ್ಧಿಗೆ ಪೂರಕವಾಗಲಿದೆ ಎಂದು ನಿರೀಕ್ಷಿಸಲಾಗಿದೆ.

- Advertisement -

Related news

error: Content is protected !!