- Advertisement -
- Advertisement -




ಒಡಿಯೂರು: ತುಳು ಭಾಷೆಯನ್ನು ರಾಜ್ಯದ ಎರಡನೇ ಅಧಿಕೃತ ಭಾಷೆಯಾಗಿ ಘೋಷಿಸಿದ ರಾಜ್ಯ ಸರ್ಕಾರದ ನಿರ್ಧಾರವನ್ನು ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನದ ಪರಮಪೂಜ್ಯ ಶ್ರೀ ಶ್ರೀ ಗುರುದೇವಾನಂದ ಸ್ವಾಮೀಜಿಯವರು ಸ್ವಾಗತಿಸಿ ಅಭಿನಂದನೆ ಸಲ್ಲಿಸಿದ್ದಾರೆ.
ಈ ಕುರಿತು ಹೇಳಿಕೆ ನೀಡಿರುವ ಸ್ವಾಮೀಜಿಯವರು, ತುಳು ಭಾಷೆಯನ್ನು ರಾಜ್ಯದ ಎರಡನೇ ಭಾಷೆಯಾಗಿ ಘೋಷಿಸುವುದು ತುಳುವರ ಬಹುಕಾಲದ ಬೇಡಿಕೆಯಾಗಿತ್ತು. ಇದು ತುಳುನಾಡಿನ ಜನರಿಗೆ ಸಂದ ದೊಡ್ಡ ಜಯವಾಗಿದೆ ಎಂದು ಬಣ್ಣಿಸಿದ್ದಾರೆ.
ಸುಮಾರು ಎರಡೂವರೆ ಸಾವಿರ ವರ್ಷಗಳಷ್ಟು ಇತಿಹಾಸವಿರುವ ತುಳು ಭಾಷೆಗೆ ಈ ಮಾನ್ಯತೆ ದೊರೆತಿರುವುದು ಅತ್ಯಂತ ಸಂತಸದ ವಿಷಯವಾಗಿದ್ದು, ಇದರಿಂದಾಗಿ ತುಳುಭಾಷೆ ಸಂವಿಧಾನದ 8ನೇ ಪರಿಚ್ಛೇದಕ್ಕೆ ಸೇರ್ಪಡೆಗೆ ರಹದಾರಿಯಾಗಿದೆ ಎಂದು ಅವರು ತಿಳಿಸಿದ್ದಾರೆ.ಈ ಐತಿಹಾಸಿಕ ನಿರ್ಧಾರ ಕೈಗೊಂಡ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಸಚಿವರು ಹಾಗೂ ಶಾಸಕರಿಗೆ ಸ್ವಾಮೀಜಿಯವರು ಕೃತಜ್ಞತೆ ಸಲ್ಲಿಸಿದ್ದಾರೆ.
- Advertisement -








