Thursday, March 28, 2024
spot_imgspot_img
spot_imgspot_img

ವಿಟ್ಲ ಉಪನೋಂದಣಿ ಅಧಿಕಾರಿ ಕಚೇರಿಗೆ ಪುತ್ತೂರು ಶಾಸಕರ ದಿಢೀರ್ ಭೇಟಿ,ಅಧಿಕಾರಿಗೆ ಫುಲ್ ಕ್ಲಾಸ್.! ಪ್ರತಿನಿತ್ಯ ಜನರನ್ನು ಸತಾಯಿಸುತ್ತಿರುವ ಅಧಿಕಾರಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ಶಾಸಕರು.

- Advertisement -G L Acharya panikkar
- Advertisement -

ವಿಟ್ಲ: ಸಾರ್ವಜನಿಕರ ನಿರಂತರ ದೂರಿನ ಹಿನ್ನೆಲೆಯಲ್ಲಿ ವಿಟ್ಲ ಉಪನೋಂದಣಿ ಕಚೇರಿಗೆ ದಿಢೀರನೆ ಭೇಟಿ ನೀಡಿದ ಪುತ್ತೂರು ಶಾಸಕ ಸಂಜೀವ ಮಠಂದೂರು ಅವರು ಉಪ ನೋಂದಣಿ ಅಧಿಕಾರಿಯನ್ನು ತರಾಟೆಗೆ ತೆಗೆದುಕೊಂಡ ಘಟನೆ ನಡೆದಿದೆ.


ವಿಟ್ಲದಲ್ಲಿ ಉಪನೋಂದಣಾಧಿಕಾರಿಗಳ ಕಚೇರಿಯಲ್ಲಿ ವಿವಿಧ ದಾಖಲೆಗಳನ್ನು ನೋಂದಣಿ ಮಾಡಿಕೊಳ್ಳಲು ಜನರು ಪ್ರತಿನಿತ್ಯ ಗಂಟೆಗಟ್ಟಲೇ ಕಾಯುತ್ತಿದ್ದು, ನೋದಣಾಧಿಕಾರಿ ತಡವಾಗಿ ಕಚೇರಿಗೆ ಹಾಜರಾಗುತ್ತಿರುವ ಬಗ್ಗೆ ಸಾರ್ವಜನಿಕರು ಪುತ್ತೂರು ಶಾಸಕರಿಗೆ ದೂರು ನೀಡಿದ್ದರು. ಈ ಬಗ್ಗೆ ಶಾಸಕರು ಬೆಳಿಗ್ಗೆನೇ ಕಚೇರಿಗೆ ಭೇಟಿ ನೀಡಿದರು. ಈ ಸಂದರ್ಭ ಅಧಿಕಾರಿಯನ್ನು ತರಾಟೆಗೆ ತೆಗೆದುಕೊಂಡು ” ನಿಮ್ಮ ಬಗ್ಗೆ ಕಳೆದ ಒಂದು ತಿಂಗಳುಗಳಿಂದ ದೂರುಗಳು ಬರುತ್ತಿವೆ. ನೀವು ಬೆಳಿಗ್ಗೆ 11 ಗಂಟೆಗೆ ಕರ್ತವ್ಯ ಹಾಜರಾಗುತ್ತಿದ್ದೀರಿ, ಪ್ರತಿನಿತ್ಯ ಜನರು ತಮ್ಮ ಕೆಲಸಕ್ಕೆ ಕಾಯಬೇಕು. ಕೆಲವರು ಕೆಲಸ ನಡೆಯದೇ ಹಿಂತಿರುಗುತ್ತಿದ್ದಾರೆ. ಜನರೊಂದಿಗೆ ದರ್ಪದಿಂದ ವರ್ತಿಸುತ್ತಿದ್ದೀರಿ ಎಂಬ ದೂರು ಬರುತ್ತಿದೆ. ನಾನು ಬಂದು ಕೆಲವು ಹೊತ್ತು ಕಳೆದರೂ ಹೊರಗಡೆ ನಿಂತುಕೊಂಡಿದ್ದೆ. ಶಾಸಕರ ಜತೆ ಹೇಗೆ ನಡೆದುಕೊಳ್ಳಬೇಕೆಂದು ನಿಮಗೆ ಗೊತ್ತಿಲ್ಲ. ಇನ್ನೂ ಜನರನ್ನು ಯಾವ ರೀತಿ ನಡೆದುಕೊಳ್ಳುತ್ತೀರಿ? ಸ್ವಲ್ಪವಾದರೂ ಜವಾಬ್ದಾರಿ ಇದೀಯಾ ನಿಮಗೆ ಎಂದು ಪ್ರಶ್ನಿಸಿದರು.


ಈ ಸಂದರ್ಭ ಮಾತನಾಡಿದ ಉಪನೋಂದಣಾಧಿಕಾರಿ ಪ್ರೇಮ ಅವರು ಸರ್ವರ್ ಸಮಸ್ಯೆ ಇದೆ. ಇಬ್ಬರು ಮಾತ್ರ ಸಿಬ್ಬಂದಿಗಳು ಮಾತ್ರ ಇರುವುದು. ಕಂಪ್ಯೂಟರ್ ಕೂಡಾ ಕೈ ಕೊಡುತ್ತಿದೆ. ಈ ಸಮಸ್ಯೆಯಿಂದ ಕೆಲಸಕಾರ್ಯ ತಡವಾಗುತ್ತದೆ. ನಾನು ಸಮಯಕ್ಕೆ ಸರಿಯಾಗಿ ಕರ್ತವ್ಯ ಹಾಜರಾಗುತ್ತಿದ್ದೇನೆ. ಟೋಕನ್ ನೀಡಿದ ಎಲ್ಲರ ಕೆಲಸ ನಡೆಯುತ್ತಿದೆ ಎಂದು ಹೇಳಿದರು. ಈ ಸಂದರ್ಭ ಮಾತನಾಡಿದ ಶಾಸಕರು ತಾಂತ್ರಿಕ ಸಮಸ್ಯೆಗಳ ಬಗ್ಗೆ ಸಂಬಂಧಪಟ್ಟ ಇಲಾಖೆಗೆ ಮಾಹಿತಿ ನೀಡಿ ಸರಿಪಡಿಸುವ ಜವಾಬ್ದಾರಿ ನಿಮ್ಮದಾಗಿದೆ. ತಮ್ಮ ಕೆಲಸಕಾರ್ಯಗಳಿಗೆ ಬರುವ ಜನರಿಗೆ ಯಾವುದೇ ಸಮಸ್ಯೆ ಆಗಬಾರದು. ಅವರೊಂದಿಗೆ ಸೌಜನ್ಯದಿಂದ ವರ್ತಿಸಬೇಕು ಎಂದು ಹೇಳಿದ ಅವರು ಬಳಿಕ ಮೇಲಾಧಿಕಾರಿಗಳಿಗೆ ಕರೆ ಮಾಡಿ ಮಾತನಾಡಿ ಇಲ್ಲಿಯ ಪರಿಸ್ಥಿತಿಯ ಬಗ್ಗೆ ವಿವರಿಸಿ, ತಕ್ಷಣವೇ ಸಮಸ್ಯೆಯನ್ನು ಬಗೆಹರಿಸಬೇಕು ಎಂದು ಸೂಚನೆ ನೀಡಿದರು.

ಈ ಸಂದರ್ಭ ಪುತ್ತೂರು ಬಿಜೆಪಿ ಮಂಡಲ ಪ್ರಧಾನ ಕಾರ್ಯದರ್ಶಿ ಪುರುಷೋತ್ತಮ ಮುಗುಳಿ ಮನೆ, ವಿಟ್ಲ ಮಹಾಶಕ್ತಿ ಕೇಂದ್ರದ ಅಧ್ಯಕ್ಷ ಅರುಣ್ ಎಂ ವಿಟ್ಲ, ಕಾರ್ಯದರ್ಶಿ ಕರುಣಾಕರ ನಾಯ್ತೋಟ್ಟು, ಮುಖಂಡರಾದ ರಾಮ್‌ದಾಸ್ ಶೆಣೈ, ನವೀನ್ ಪಡ್ನೂರು, ರಾಜೇಶ್ ಅನ್ನಮೂಲೆ, ಉದಯ ಆಲಂಗಾರು ಮೊದಲಾದವರು ಉಪಸ್ಥಿತರಿದ್ದರು.

- Advertisement -

Related news

error: Content is protected !!