Saturday, August 29, 2026
spot_imgspot_img
spot_imgspot_img

ಮಾಜಿ ಕಾರ್ಪೋರೇಟರ್ ರೇಖಾ ಕದಿರೇಶ್ ಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್; ರೇಖಾ ಕದಿರೇಶ್ ಕುಟುಂಬಸ್ಥರ ಬಂಧನ

- Advertisement -
- Advertisement -

ಬೆಂಗಳೂರು: ಮಾಜಿ ಕಾರ್ಪೊರೇಟರ್ ರೇಖಾ ಕದಿರೇಶ್ ಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದ್ದು, ಕದಿರೇಶ್ ಸಹೋದರಿ ಮಾಲಾ, ಆಕೆಯ ಪುತ್ರ ಅರುಳ್ ನನ್ನು ಕಾಟನ್ ಪೇಟೆ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಕಳೆದ ಮೂರು ದಿನಗಳಿಂದ ಪೊಲೀಸರು ನಡೆಸಿದ ತನಿಖೆಯ ಮುಂದುವರಿದ ಭಾಗವಾಗಿ ಪೊಲೀಸರು ರೇಖಾ ಕದಿರೇಶ್ ಹತ್ಯೆಯಲ್ಲಿ ಮಾಲಾ ಮತ್ತು ಅರುಳ್ ಅವರ ಪಾತ್ರ ಇರುವ ಬಗ್ಗೆ ಕಂಡುಕೊಂಡಿದ್ದಾರೆ. ಇದರಿಂದಾಗಿ ಪೊಲೀಸರು ಅವರನ್ನು ಬಂಧಿಸಿದ್ದಾರೆ.

ಇದೀಗ ಮಾಜಿ ಕಾರ್ಪೋರೇಟರ್ ಹತ್ಯೆಗೆ ಸಂಬಂಧಿಸಿದಂತೆ ಬಂಧಿತ ಆರೋಪಿಗಳ ಸಂಖ್ಯೆ 7ಕ್ಕೆ ಹೆಚ್ಚಳವಾಗಿದೆ. ಮಾಜಿ ಕಾರ್ಪೋರೇಟರ್ ರೇಖಾ ಅವರನ್ನು 2 ದಿನಗಳ ಮೊದಲು ಅವರ ಕಚೇರಿ ಬಳಿ ದುಷ್ಕರ್ಮಿಗಳು ಬರ್ಬರವಾಗಿ ಕೊಲೆ ಮಾಡಿದ್ದರು. ಘಟನೆಗೆ ಇಡೀ ರಾಜ್ಯವೇ ತಲ್ಲಣಗೊಂಡಿತ್ತು. ಮೂರು ವರ್ಷದ ಮೊದಲು ರೇಖಾ ಪತಿ ಕದಿರೇಶ್ ಅವರನ್ನು ಕೂಡ ದುಷ್ಕರ್ಮಿಗಳು ಹತ್ಯೆ ಮಾಡಿದ್ದರು.

- Advertisement -

Related news

error: Content is protected !!