Sunday, June 14, 2026
spot_imgspot_img
spot_imgspot_img

ರೇಖಾ ಕದಿರೇಶ್ ಹತ್ಯೆ ಪ್ರಕರಣ: ಪ್ರಮುಖ ಆರೋಪಿಗಳಾದ ಪೀಟರ್, ಸೂರ್ಯ ಬಂಧನ

- Advertisement -
- Advertisement -

ಬೆಂಗಳೂರು: ಬಿಜೆಪಿ ಮಾಜಿ ಕಾರ್ಪೊರೇಟರ್ ರೇಖಾ ಕದಿರೇಶ್ ಹತ್ಯೆಯ ಪ್ರಮುಖ ಆರೋಪಿಗಳಾದ ಪೀಟರ್ ಮತ್ತು ಸೂರ್ಯನನ್ನು ಪೊಲೀಸರು ಇಂದು ಮಧ್ಯಾಹ್ನ ಬಂಧಿಸಿದ್ದಾರೆ.

ಬೆ0ಗಳೂರಿನ ಕಾಮಾಕ್ಷಿಪಾಳ್ಯದ ಸುಮನಹಳ್ಳಿಯ ಶನಿ ಮಹಾತ್ಮ ದೇವಸ್ಥಾನದ ಬಳಿ ಆರೋಪಿಗಳು ಪೊಲೀಸರಿಗೆ ಸಿಕ್ಕಿದ್ದಾರೆ. ಶರಣಾಗುವಂತೆ ಪೊಲೀಸರು ಹೇಳಿದಾಗ ಪೋಲೀಸರ ಮೇಲೆ ದಾಳಿಗೆ ಮುಂದಾಗಿದ್ದಾರೆ. ಈ ಸಮಯದಲ್ಲಿ ಇನ್ಸ್ಪೆಕ್ಟರ್‌ಗಳಾದ ಶಿವಾನಂದ್ ಮತ್ತು ಚಿದಾನಂದ್‌ರವರು ಫೈರಿಂಗ್ ಮಾಡಿ ಬಂಧಿಸಿದ್ದಾರೆ.

ಆರೋಪಿಗಳನ್ನು 24 ಗಂಟೆಗಳಲ್ಲಿಯೇ ಬಂಧಿಸಲಾಗುವುದು ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಹೇಳಿದ್ದರು. ಗೃಹ ಸಚಿವರು ಕೂಡ ಶೀಘ್ರವೇ ಆರೋಪಿಗಳನ್ನು ಬಂಧಿಸುವ ವಿಶ್ವಾಸ ವ್ಯಕ್ತಪಡಿಸಿದ್ದರು. ಇದೀಗ ಪೊಲೀಸರು ಕಾರ್ಯಾಚರಣೆಯಲ್ಲಿ ಯಶಸ್ವಿಯಾಗಿದ್ದಾರೆ.

- Advertisement -

Related news

error: Content is protected !!