Thursday, June 18, 2026
spot_imgspot_img
spot_imgspot_img

ರಿಲಯನ್ಸ್ ಮುಖ್ಯಸ್ಥ ಮುಕೇಶ್ ಅಂಬಾನಿ ಕೊಲೆ ಬೆದರಿಕೆ; 20 ಕೋಟಿ ರೂ.ಗೆ ಡಿಮ್ಯಾಂಡ್

- Advertisement -
- Advertisement -

ರಿಲಯನ್ಸ್ ಇಂಡಸ್ಟ್ರೀಸ್ ಮುಖ್ಯಸ್ಥ ಮುಕೇಶ್ ಅಂಬಾನಿ ಅವರಿಗೆ ಮತ್ತೆ ಕೊಲೆ ಬೆದರಿಕೆ ಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಇಮೇಲ್ ಮೂಲಕ ಕೊಲೆ ಬೆದರಿಕೆ ಹಾಕಿರುವ ವ್ಯಕ್ತಿ, 20 ಕೋಟಿ ರೂ. ಕೊಡಬೇಕು ಎಂದು ಬೇಡಿಕೆ ಇಟ್ಟಿದ್ದಾನೆ.

ನೀವು ನಮಗೆ 20 ಕೋಟಿ ರೂಪಾಯಿ ನೀಡದಿದ್ದರೆ, ನಾವು ನಿಮ್ಮನ್ನು ಕೊಲ್ಲುತ್ತೇವೆ. ನಾವು ಭಾರತದಲ್ಲಿ ಅತ್ಯುತ್ತಮ ಶೂಟರ್‌ಗಳನ್ನು ಹೊಂದಿದ್ದೇವೆ ಎಂದು ಎಚ್ಚರಿಕೆ ನೀಡಿದ್ದಾನೆ. ಅ.27ರಂದು ಶಾದಾಬ್ ಖಾನ್ ಎಂಬ ಹೆಸರಿನಿಂದ ಈ ಬೆದರಿಕೆ ಮೇಲ್ ಬಂದಿರುವುದಾಗಿ ಪೊಲೀಸರು ತಿಳಿಸಿದ್ದಾರೆ. ಸದ್ಯ ಅಂಬಾನಿ ನಿವಾಸ ಆಂಟಿಲಿಯಾದಲ್ಲಿ ಭದ್ರತಾ ಅಧಿಕಾರಿಗಳ ಗಮನಕ್ಕೆ ಬಂದ ನಂತರ ಪೊಲೀಸರು ದೂರು ದಾಖಲಿಸಿಕೊಂಡಿದ್ದಾರೆ. ಈ ಸಂಬಂಧ ತನಿಖೆ ಮುಂದುವರಿದಿದೆ.

ಕಳೆದ ವರ್ಷ ಅಂಬಾನಿ ಮತ್ತು ಅವರ ಕುಟುಂಬ ಸದಸ್ಯರನ್ನು ಗುರಿಯಾಗಿಸಿಕೊಂಡು ಅನಾಮಧೇಯ ಕರೆಗಳನ್ನು ಮಾಡಿದ್ದಕ್ಕಾಗಿ ಬಿಹಾರದ ವ್ಯಕ್ತಿಯನ್ನು ಮುಂಬಯಿ ಪೊಲೀಸರು ಬಂಧಿಸಿದ್ದರು. ದಕ್ಷಿಣ ಮುಂಬಯಿಯಲ್ಲಿರುವ ಅಂಬಾನಿ ಕುಟುಂಬದ ನಿವಾಸ ಆಂಟಿಲಿಯಾದ ಜತೆಗೆ ಎಚ್‍ಎನ್ ರಿಲಯನ್ಸ್ ಫೌಂಡೇಶನ್ ಆಸ್ಪತ್ರೆಯನ್ನು ಸ್ಫೋಟಿಸುವುದಾಗಿ ಬೆದರಿಕೆ ಕರೆ ಬಂದಿತ್ತು.

- Advertisement -

Related news

error: Content is protected !!