Tuesday, April 30, 2024
spot_imgspot_img
spot_imgspot_img

`ಹೆಲ್ತ್ ಡ್ರಿಂಕ್ಸ್’ ಪಟ್ಟಿಯಿಂದ ಬೋರ್ನ್‍ವಿಟಾವನ್ನು ತೆಗೆದುಹಾಕಿ: ಕೇಂದ್ರದಿಂದ ಮಹತ್ವದ ಆದೇಶ

- Advertisement -G L Acharya panikkar
- Advertisement -

ಆರೋಗ್ಯಕರ ಪಾನಿಯ ಪಟ್ಟಿಯಿಂದ ಬೋರ್ನ್‍ವಿಟಾವನ್ನು ತೆಗೆದು ಹಾಕುವಂತೆ ವಾಣಿಜ್ಯ ಮತ್ತು ಕೈಗಾರಿಕಾ ಸಚಿವಾಲಯವು ಇ-ಕಾಮರ್ಸ್ ಕಂಪನಿಗಳಿಗೆ ಸಲಹೆ ನೀಡಿದೆ. ಪೋರ್ಟಲ್ ಮತ್ತು ಪ್ಲಾಟ್‍ಫಾರ್ಮ್‍ಗಳಲ್ಲಿ ಬೋರ್ನ್‍ವಿಟಾ ಸೇರಿದಂತೆ ಎಲ್ಲಾ ಪಾನೀಯಗಳು ಈ ವರ್ಗದಿಂದ ಕೈಬಿಡುವಂತೆ ಆದೇಶ ನೀಡಿದೆ.

ನ್ಯಾಷನಲ್ ಕಮಿಷನ್ ಫಾರ್ ಪ್ರೊಟೆಕ್ಷನ್ ಆಫ್ ಚೈಲ್ಡ್ ರೈಟ್ಸ್‌ನ (NCPCR) ತನಿಖೆಯಯಲ್ಲಿ ಬೋರ್ನ್‍ವಿಟಾ ಹೆಚ್ಚಿನ ಸಕ್ಕರೆ ಮಟ್ಟವನ್ನು ಹೊಂದಿದೆ ಎಂದು ತಿಳಿದುಬಂದಿದೆ. ಇದು ಸ್ವೀಕಾರಾರ್ಹ ಮಿತಿಗಳಿಗಿಂತ ಹೆಚ್ಚು ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ. ಕಂಪನಿಗಳು ಸುರಕ್ಷತಾ ಮಾನದಂಡಗಳು ಮತ್ತು ಮಾರ್ಗಸೂಚಿಗಳನ್ನು ಅನುಸರಿಸಲು ವಿಫಲವಾಗಿವೆ. ಅಲ್ಲದೇ ಆರೋಗ್ಯಕರ ಪಾನೀಯಗಳು ಎಂದು ಬಿಂಬಿಸುತ್ತಿರುವ ಕಂಪನಿಗಳ ವಿರುದ್ಧ ಕ್ರಮ ಕೈಗೊಳ್ಳಲು ಎನ್‍ಸಿಪಿಸಿಆರ್, ಭಾರತೀಯ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರಕ್ಕೆ (FSSAI) ಸೂಚಿಸಿತ್ತು

ಏಪ್ರಿಲ್ 10ರಂದು ಈ ಆದೇಶ ಹೊರಡಿಸಲಾಗಿತ್ತು. ನ್ಯಾಷನಲ್ ಕಮಿಷನ್ ಫಾರ್ ಪ್ರೊಟೆಕ್ಷನ್ ಆಫ್ ಚೈಲ್ಡ್ ರೈಟ್ಸ್, ಇದು ಸಿಆರ್ ಪಿಸಿ ಕಾಯಿದೆ 2005 ರ ಸೆಕ್ಷನ್ 14 ರ ಅಡಿಯಲ್ಲಿ ಈ ಬಗ್ಗೆ ವಿಚಾರಣೆಯನ್ನು ನಡೆಸಿದೆ. ಹಾಗೂ 2005ರ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಕಾಯಿದೆಯ ಸೆಕ್ಷನ್ (3) ಅಡಿಯಲ್ಲಿ ರಚಿತವಾದ ಶಾಸನಬದ್ಧ ಸಂಸ್ಥೆಗಳು ಎಫ್‌ಎಸ್‌ಎಸ್ ಕಾಯಿದೆ 2006ರ ಅಡಿಯಲ್ಲಿ ಆರೋಗ್ಯ ಪಾನೀಯಗಳ ಬಗ್ಗೆ ಎಫ್‌ಎಸ್‌ಎಸ್‌ಎಐ ಮತ್ತು ಮೊಂಡೆಲೆಜ್ ಇಂಡಿಯಾ ಫುಡ್ ಪ್ರೈವೇಟ್ ಲಿಮಿಟೆಡ್ ಸಲ್ಲಿಸಿದ ನಿಯಮಗಳು ಮತ್ತು ನಿಬಂಧನೆಗಳನ್ನು ಅನುಸರಿಸುವಂತೆ ಏಪ್ರಿಲ್ 10ರಂದು ಹೊರಡಿಸಿದ ಅಧಿಸೂಚನೆಯಲ್ಲಿ ತಿಳಿಸಲಾಗಿತ್ತು.

- Advertisement -

Related news

error: Content is protected !!