Wednesday, June 26, 2024
spot_imgspot_img
spot_imgspot_img

ರೇಣುಕಾ ಸ್ವಾಮಿ ಹತ್ಯೆ ಕೇಸ್; ಹಾಸ್ಯ ನಟ ಚಿಕ್ಕಣ್ಣಗೂ ನೋಟಿಸ್‌..!

- Advertisement -G L Acharya panikkar
- Advertisement -

ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ದರ್ಶನ್‌ ಗ್ಯಾಂಗ್‌ ಬಂಧನವಾದ ಬೆನ್ನಲ್ಲೇ ವಿಚಾರಣೆಗೆ ಹಾಜರಾಗುವಂತೆ ಸ್ಯಾಂಡಲ್‌ವುಡ್‌ ಖ್ಯಾತ ಹಾಸ್ಯನಟ ಚಿಕ್ಕಣ್ಣಗೆ ಪೊಲೀಸರು ನೋಟಿಸ್‌ ನೀಡಿದ್ದಾರೆ.

ಕೊಲೆ ನಡೆದ ಜೂನ್‌ 8 ಶನಿವಾರದಂದು ದರ್ಶನ್‌ ಮತ್ತು ಗ್ಯಾಂಗ್‌ ಸದಸ್ಯರು ಆರ್‌ಆರ್‌ ನಗರದ ಸ್ಟೋನಿಬ್ರೂಕ್‌ ಪಬ್‌ನಲ್ಲಿ ಮಧ್ಯಾಹ್ನದಿಂದ ಪಾರ್ಟಿ ಮಾಡಿದ್ದರು. ಈ ಪಾರ್ಟಿಯಲ್ಲಿ ಚಿಕ್ಕಣ್ಣ ಭಾಗಿಯಾಗಿದ್ದರು.

ಸಂಜೆ ವೇಳೆಗೆ ಸ್ವಲ್ಪ ಕೆಲಸವಿದೆ ಎಂದು ಹೇಳಿ ದರ್ಶನ್ ಹೊರಟಿದ್ದರು. ರೇಣುಕಾಸ್ವಾಮಿ ಕೊಲೆಯಾದ ದಿನವೇ ದರ್ಶನ್‌ ಜೊತೆ ಪಾರ್ಟಿ ಮಾಡಿದ್ದರಿಂದ ಪೊಲೀಸರು ಈಗ ತುರ್ತು ವಿಚಾರಣೆಗೆ ಹಾಜರಾಗುವಂತೆ ನೋಟಿಸ್‌ನಲ್ಲಿ ಉಲ್ಲೇಖಿಸಿದ್ದಾರೆ.

ಈ ಪ್ರಕರಣದಲ್ಲಿ ನೇರವಾಗಿ ಭಾಗಿಯಾಗದ ಕಾರಣ ಚಿಕ್ಕಣ್ಣ ಅವರನ್ನು ಬಂಧನ ಮಾಡುವುದಿಲ್ಲ. ಬದಲಾಗಿ ಸಾಕ್ಷಿಯನ್ನಾಗಿ ಪರಿಗಣಿಸಲಿದ್ದಾರೆ. ಕೊಲೆಯ ಬಗ್ಗೆ ಮಾಹಿತಿ ಇಲ್ಲದೇ ಇದ್ದರೂ ಕೂಡ, ಪಾರ್ಟಿಯಲ್ಲಿದ್ದ ಎಂಬ ಕಾರಣಕ್ಕೆ ಸಾಕ್ಷಿಯಾಗಿ ಪರಿಗಣನೆ ಮಾಡಲು ಪೊಲೀಸರು ಮುಂದಾಗಿದ್ದಾರೆ.

- Advertisement -

Related news

error: Content is protected !!