Sunday, June 14, 2026
spot_imgspot_img
spot_imgspot_img

ರೇಣುಕಾ ಸ್ವಾಮಿ ಹತ್ಯೆ ಪ್ರಕರಣ: ದರ್ಶನ್​ ಹಾಗೂ ಗ್ಯಾಂಗ್​ಗೆ ಜುಲೈ 4ರ ವರೆಗೆ ನ್ಯಾಯಾಂಗ ಬಂಧನ

- Advertisement -
- Advertisement -

ರೇಣುಕಾ ಸ್ವಾಮಿ ಹತ್ಯೆ ಪ್ರಕರಣದಲ್ಲಿ ಬಂಧಿಸಲ್ಪಟ್ಟಿರುವ ಎರಡನೇ ಆರೋಪಿ ದರ್ಶನ್ ಹಾಗೂ ವಿನಯ್, ಪ್ರದೋಷ್, ಧನರಾಜ್ ಅವರ ಎರಡು ದಿನದ ಪೊಲೀಸ್ ಕಸ್ಟಡಿ ಅವಧಿ ಮುಗಿದ ಕಾರಣ ಇಂದು (ಜೂನ್ 22) ಬೆಂಗಳೂರಿನ 24ನೇ ಎಸಿಎಂಎಂ ಕೋರ್ಟ್​ಗೆ ಹಾಜರುಪಡಿಸಲಾಯಿತು.

ಮತ್ತೆ ಪೊಲೀಸರು ಕಸ್ಟಡಿಗೆ ಕೇಳಲಿಲ್ಲವಾದ್ದರಿಂದ ದರ್ಶನ್ ಹಾಗೂ ಇತರೆ ಮೂವರು ಆರೋಪಿಗಳಿಗೆ 13 ದಿನಗಳ ನ್ಯಾಯಾಂಗ ಬಂಧನ ವಿಧಿಸಲಾಯ್ತು. ಇದೇ ಪ್ರಕರಣದ ಆರೋಪಿಗಳಾದ ಪವಿತ್ರಾ ಹಾಗೂ ಇತರರಿಗೆ ಎರಡು ದಿನಗಳ ಹಿಂದೆಯೇ ನ್ಯಾಯಾಂಗ ಬಂಧನ ವಿಧಿಸಲಾಗಿದೆ.
ಇಂದು (ಜೂನ್ 22) ದರ್ಶನ್ ಹಾಗೂ ಇತರೆ ಮೂವರು ಆರೋಪಿಗಳನ್ನು ಪರಪ್ಪನ ಅಗ್ರಹಾರ ಕಾರಾಗೃಹಕ್ಕೆ ಸ್ಥಳಾಂತರಿಸಲಾಗುತ್ತದೆ. ಜುಲೈ 4 ರ ವರೆಗೆ ದರ್ಶನ್ ಹಾಗೂ ಅವರ ಗ್ಯಾಂಗ್ ಜೈಲಿನಲ್ಲಿರಬೇಕಾಗಿದೆ.

- Advertisement -

Related news

error: Content is protected !!