Saturday, June 28, 2025
spot_imgspot_img
spot_imgspot_img

ರೇಣುಕಾ ಸ್ವಾಮಿ ಕೊಲೆ ಪ್ರಕರಣ: ಸೆ.30ಕ್ಕೆ ದರ್ಶನ್ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ

- Advertisement -
- Advertisement -

ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲು ವಾಸ ಅನುಭವಿಸುತ್ತಿರುವ ಆರೋಪಿ ನಟ ದರ್ಶನ್ ಜಾಮೀನು ಅರ್ಜಿ ವಿಚಾರಣೆ ಸೆಪ್ಟೆಂಬರ್ 30ಕ್ಕೆ ಮುಂದೂಡಲಾಗಿದೆ.

ದರ್ಶನ್ ಪರ ವಕೀಲರು ವಾದ ಮಂಡನೆಗೆ ಕಾಲಾವಕಾಶ ಕೇಳಿದ ಹಿನ್ನೆಲೆ ಪ್ರಕರಣದ ವಿಚಾರಣೆಯನ್ನು ಮುಂದೂಡಲಾಗಿದೆ. ಈ ಹಿಂದೆ, ಜಾಮೀನಿಗೆ ಅರ್ಜಿ ಸಲ್ಲಿಸಿದ್ದ ದರ್ಶನ್ ಪರ ವಕೀಲರು, ಎಸ್‌ಪಿಪಿ ಪ್ರಸನ್ನ ಅವರು ಆಕ್ಷೇಪಣೆ ಸಲ್ಲಿಸಲು ತಡ ಮಾಡುತ್ತಿದ್ದಾರೆ ಎಂದು ಆರೋಪಿಸಿದ್ದರು. ಆದರೀಗ ಎಸ್‌ಪಿಪಿ ಆಕ್ಷೇಪಣೆ ಸಲ್ಲಿಸಿದ ಬಳಿಕ ತಾವೇ ಇದೀಗ ವಾದ ಮಂಡನೆಗೆ ಕಾಲಾವಕಾಶ ಕೇಳಿ ವಿಚಾರಣೆಯನ್ನು ಮುಂದಕ್ಕೆ ಹಾಕಿಸಿಕೊಂಡಿದ್ದಾರೆ.

ಇಂದು ರೇಣುಕಾಸ್ವಾಮಿ ಕೊಲೆ ಕೇಸಲ್ಲಿ ಎ2 ಆರೋಪಿಯಾಗಿರುವಂತ ನಟ ದರ್ಶನ್ ಜಾಮೀನು ಕೋರಿ ಸಲ್ಲಿಸಿದ್ದಂತ ಅರ್ಜಿಯನ್ನು ಬೆಂಗಳೂರಿನ 57ನೇ ಸಿಟಿ ಸಿವಿಲ್ ನ್ಯಾಯಾಲಯವು ನಡೆಸಿತು. ಹಿರಿಯ ವಕೀಲರು ಬರಬೇಕಿರುವುದರಿಂದ ಕಾಲಾವಕಾಶವನ್ನು ಎಸ್ ಪಿಪಿ ಪ್ರಸನ್ನ ಕುಮಾರ್ ಕೋರಿದರು. ಅಲ್ಲದೇ ದರ್ಶನ್ ಪರ ವಕೀಲರು ವಾದ ಮಂಡಿಸಲು ಕಾಲಾವಕಾಶ ಕೋರಿದ್ದರು. ಹೀಗಾಗಿ ಸೆಪ್ಟೆಂಬರ್.30ಕ್ಕೆ ಕೋರ್ಟ್ ವಿಚಾರಣೆ ಮುಂದೂಡಿದೆ.

ದರ್ಶನ್ ಅವರು ಬಂಧನವಾದಾಗಿನಿಂದ ಇದೇ ಮೊದಲ ಬಾರಿಗೆ ಅಂದರೆ ಸೆಪ್ಟೆಂಬರ್ 21ರಂದು ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದರು. ಆದರೆ ಅರ್ಜಿಗೆ ತಕರಾರು ಸಲ್ಲಿಸಲು ಎಸ್‌ಪಿಪಿ ಅವರು ತಡ ಮಾಡಿದ್ದ ಕಾರಣ 2 ಬಾರಿ ವಿಚಾರಣೆ ಮುಂದೂಡಿ ಇಂದು ವಿಚಾರಣೆ ನಿಗದಿಯಾಗಿತ್ತು. ಆದರೆ ಇಂದು ದರ್ಶನ್ ಪರ ವಕೀಲರೇ ವಿಚಾರಣೆಗೆ ಕಾಲಾವಕಾಶ ಕೋರಿದ ಹಿನ್ನಲೆ ಅರ್ಜಿ ವಿಚಾರಣೆಯನ್ನು ನ್ಯಾಯಾಧೀಶರು ಸೆ. 30ಕ್ಕೆ ಮುಂದೂಡಿದ್ದಾರೆ.

- Advertisement -

Related news

error: Content is protected !!