Sunday, June 14, 2026
spot_imgspot_img
spot_imgspot_img

ರೇಣುಕಾ ಸ್ವಾಮಿ ಕೊಲೆ ಪ್ರಕರಣ; ನಟ ದರ್ಶನ್ ಸೇರಿ 17 ಆರೋಪಿಗಳಿಗೆ ಜು.18 ರವರೆಗೆ ನ್ಯಾಯಾಂಗ ಬಂಧನ ವಿಸ್ತರಣೆ

- Advertisement -
- Advertisement -

ಬೆಂಗಳೂರು: ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ಆರೋಪಿಗಳಾಗಿ ಪೊಲೀಸರ ಬಲೆಗೆ ಬಿದ್ದಿರುವ ನಟ ದರ್ಶನ್​, ನಟಿ ಪವಿತ್ರಾ ಗೌಡ ಮುಂತಾದವರಿಗೆ ಸಂಕಷ್ಟ ಹೆಚ್ಚಾಗಿದೆ. ಇಂದು (ಜುಲೈ 4) ನ್ಯಾಯಾಂಗ ಬಂಧನದ ಅವಧಿ ಅಂತ್ಯವಾದ ಹಿನ್ನೆಲೆಯಲ್ಲಿ ವಿಡಿಯೋ ಕಾನ್ಫರೆನ್ಸ್​ ಮೂಲಕ ಜಡ್ಜ್​ ಮುಂದೆ ಆರೋಪಿಗಳನ್ನು ಹಾಜರುಪಡಿಸಲಾಗಿತ್ತು. ಎಲ್ಲ ಆರೋಪಿಗಳ ನ್ಯಾಯಾಂಗ ಬಂಧನ ಅವಧಿ ವಿಸ್ತರಿಸುವಂತೆ ಎಸ್​ಪಿಪಿ ರಿಮ್ಯಾಂಡ್ ಅರ್ಜಿ ಸಲ್ಲಿಕೆ ಹಿನ್ನೆಲೆಯಲ್ಲಿ ವಿಚಾರಣೆ ನಡೆಸಲಾಯಿತು. ಆರ್ಥಿಕ ಅಪರಾಧಗಳ ಕೋರ್ಟ್​ಗೆ ರಿಮ್ಯಾಂಡ್ ಅರ್ಜಿ ಸಲ್ಲಿಕೆ ಆಗಿದೆ. ಜುಲೈ 18ರವರೆಗೆ ಆರೋಪಿಗಳ ನ್ಯಾಯಾಂಗ ಬಂಧನ ವಿಸ್ತರಿಸಿ ಕೋರ್ಟ್ ಆದೇಶ ನೀಡಿದೆ.

ಕೊಲೆ ಆರೋಪಿಗಳಾದ ಪವಿತ್ರಾ ಗೌಡ, ದರ್ಶನ್​ ಹಾಗೂ ಅವರ ಸಹಚರರಿಗೆ ಜೈಲೇ ಗತಿಯಾಗಿದೆ. ಪರಪ್ಪನ ಅಗ್ರಹಾರ ಹಾಗೂ ತುಮಕೂರು ಜೈಲಿನಲ್ಲಿ ಇರುವ ಆರೋಪಿಗಳನ್ನು ವಿಡಿಯೋ ಕಾನ್ಫರೆನ್ಸ್​ನಲ್ಲಿ ಹಾಜರು ಪಡಿಸಲಾಯಿತು. ಜಡ್ಜ್ ಎಲ್ಲರ ಹೆಸರು ಕರೆಯುತ್ತಿದ್ದಂತೆಯೇ ಕೈಎತ್ತಿ ಹಾಜರಿ ಖಾತರಿಪಡಿಸಿದರು. ದರ್ಶನ್​ ಅವರು ಜೈಲಿನಿಂದ ಹೊರಬರಲಿ ಎಂಬುದು ಅಭಿಮಾನಿಗಳು ಮತ್ತು ಆಪ್ತರ ಬಯಕೆ ಆಗಿದೆ. ಆದರೆ ಇದು ಗಂಭೀರ ಪ್ರಕರಣ ಆದ್ದರಿಂದ ಜಾಮೀನು ಸಿಗುವುದು ಸದ್ಯಕ್ಕೆ ಕಷ್ಟವಾಗಿದೆ.

ದರ್ಶನ್​ ಸ್ನೇಹಿತೆಯಾದ ಪವಿತ್ರಾ ಗೌಡಗೆ ಚಿತ್ರದುರ್ಗದ ರೇಣುಕಾ ಸ್ವಾಮಿ ಅಶ್ಲೀಲ ಸಂದೇಶ ಕಳಿಸಿದ್ದ ಎನ್ನಲಾಗಿದೆ. ಆತನನ್ನು ಚಿತ್ರದುರ್ಗದಿಂದ ಬೆಂಗಳೂರಿಗೆ ಕರೆತಂದು ಭೀಕರವಾಗಿ ಹತ್ಯೆ ಮಾಡಿದ ಆರೋಪದ ಮೇಲೆ ದರ್ಶನ್​ ಹಾಗೂ ಅವರ ಗ್ಯಾಂಗ್ ಜೈಲು ಪಾಲಾಗಿದೆ.

- Advertisement -

Related news

error: Content is protected !!