ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದೆ. ಕೊಲೆ ತನಿಖೆಯಲ್ಲಿ ಪೊಲೀಸರಿಗೆ ದರ್ಶನ್ ವಿರುದ್ದ ಮತ್ತೊಂದು ಬಹುದೊಡ್ಡ ಸಾಕ್ಷಿ ಸಿಕ್ಕಿದೆ.
ಪ್ರಕರಣ ನಡೆದ ದಿನ ದರ್ಶನ್ ಧರಿಸಿದ್ದ ಬಟ್ಟೆಗಳ ಮೇಲೆ ರೇಣುಕಾ ಸ್ವಾಮಿ ದೇಹದ ರಕ್ತದ ಕಲೆಗಳು ಇರುವುದು ಪತ್ತೆಯಾಗಿದ್ದು, ಅವರಿಗೆ ಮತ್ತಷ್ಟು ಸಂಕಷ್ಟ ಹೆಚ್ಚಾಗಿದೆ. ದರ್ಶನ್ ಮನೆಯಿಂದ ವಶಪಡಿಸಿಕೊಂಡಿದ್ದ ನೀಲಿ ಬಣ್ಣ ಜೀನ್ಸ್ ಪ್ಯಾಂಟ್ ಹಾಗೂ ಕಪ್ಪು ರೌಂಡ್ ನೆಕ್ ಶರ್ಟ್ನಲ್ಲಿ ರಕ್ತದ ಕಲೆ ಕಂಡು ಬಂದಿದೆ.
ವಿಧಿ ವಿಜ್ಞಾನ ಪ್ರಯೋಗಾಲಯ ವರದಿಯಲ್ಲಿ ದರ್ಶನ್ ಬಟ್ಟೆ ಮೇಲೆ ರೇಣುಕಾ ಸ್ವಾಮಿ ದೇಹದ ರಕ್ತದ ಕಲೆಗಳು ಇರುವುದು ಧೃಡಪಟ್ಟಿದೆ. ಈ ಮೂಲಕ ಪೊಲೀಸರು ದರ್ಶನ್ ವಿರುದ್ಧ ಇನ್ನೊಂದು ಮಹತ್ವದ ಸಾಕ್ಷಿಯನ್ನು ಸಂಗ್ರಹಿಸಿದ್ದಾರೆ.
ಎಫ್‌ಎಸ್‌ಎಲ್ ಪರಿಶೀಲನೆ ವೇಳೆ ದರ್ಶನ್ ಅವರ ಬಟ್ಟೆಯ ಮೇಲೆ ರಕ್ತದ ಕಲೆಗಳು ಪತ್ತೆಯಾಗಿದ್ದವು. ಇವುಗಳು ರೇಣುಕಾ ಸ್ವಾಮಿಯ ದೇಹದ ರಕ್ತ ಎಂಬುದು ವರದಿಯಲ್ಲಿ ಧೃಡಪಟ್ಟಿದೆ. ಇದು ರೇಣುಕಾಸ್ವಾಮಿ ಕೊಲೆಯಲ್ಲಿ ದರ್ಶನ್ ಭಾಗಿಯಾಗಿದ್ದರು ಎನ್ನುವುದಕ್ಕೆ ಬಲವಾದ ಸಾಕ್ಷಿಯಾಗಿರಲಿದೆ. ಇನ್ನು ಇದರೊಂದಿಗೆ ಎಫ್‌ಎಸ್‌ಎಲ್ ತಂಡದವರು ವಶಕ್ಕೆ ಪಡೆದಿರುವ ಇನ್ನೂ ಹಲವು ವಸ್ತುಗಳ ವರದಿ ಬರುವುದು ಬಾಕಿ ಉಳಿದಿದೆ.