Sunday, June 7, 2026
spot_imgspot_img
spot_imgspot_img

ರೇಣುಕಾಸ್ವಾಮಿ ಕೊಲೆ ಪ್ರಕರಣ; ನಟ ದರ್ಶನ್ ಮತ್ತು ಗ್ಯಾಂಗ್‌ಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ..!

- Advertisement -
- Advertisement -

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಮತ್ತು ಗ್ಯಾಂಗ್‌ಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಿಸಿ 24ನೇ ಎಸಿಎಂಎಂ ನ್ಯಾಯಾಲಯ ಆದೇಶ ಹೊರಡಿಸಿದೆ.

ದರ್ಶನ್ ಮತ್ತು ಗ್ಯಾಂಗ್‌ಗೆ ಈಗಾಗಲೇ ವಿಧಿಸಿದ್ದ 14 ದಿನಗಳ ನ್ಯಾಯಾಂಗ ಬಂಧನ ಇಂದಿಗೆ ಅಂತ್ಯವಾಗಿತ್ತು. ಈ ಹಿನ್ನೆಲೆಯಲ್ಲಿ ವೀಡಿಯೋ ಕಾನ್ಫರೆನ್ಸ್ ಮೂಲಕ ಆರೋಪಿಗಳನ್ನು ನ್ಯಾಯಾಧೀಶರ ಮುಂದೆ ಹಾಜರುಪಡಿಸಲಾಗಿತ್ತು. ಪವಿತ್ರಾ ಗೌಡರನ್ನು ಮಾತ್ರ ಪ್ರತ್ಯೇಕವಾದ ಕೊಠಡಿಯಲ್ಲಿ ಹಾಜರುಪಡಿಸಲಾಗಿತ್ತು. ಆರೋಪಿಗಳಿಗೆ ಆ.1 ರವರೆಗೆ ನ್ಯಾಯಾಂಗ ಬಂಧನ ವಿಸ್ತರಿಸಿ ನ್ಯಾಯಾಲಯ ಆದೇಶಿಸಿದೆ.

ಜೂ.11 ರಂದು ರೇಣುಕಾಸ್ವಾಮಿ ಕೊಲೆ ಪ್ರಕರಣ ಸಂಬಂಧ ದರ್ಶನ್ ಬಂಧನ ಮಾಡಲಾಗಿತ್ತು. ಕೊಲೆ ಪ್ರಕರಣದಲ್ಲಿ ನಟ ದರ್ಶನ್, ಪವಿತ್ರಾ ಗೌಡ ಸೇರಿದಂತೆ ಒಟ್ಟು 17 ಆರೋಪಿಗಳು ಜೈಲಿನಲ್ಲಿದ್ದಾರೆ. ಪರಪ್ಪನ ಅಗ್ರಹಾರ ಜೈಲಿನಲ್ಲಿ 13, ತುಮಕೂರು ಜೈಲಿನಲ್ಲಿ 4 ಆರೋಪಿಗಳು ಇದ್ದಾರೆ.

- Advertisement -

Related news

error: Content is protected !!