- Advertisement -
- Advertisement -


ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ದರ್ಶನ್ ಗ್ಯಾಂಗ್‍ನ ಮತ್ತಿಬ್ಬರು ಆರೋಪಿಗಳನ್ನು ಕಾಮಾಕ್ಷಿಪಾಳ್ಯ ಪೊಲೀಸರು ಬಂಧಿಸಿದ್ದಾರೆ.
ಚಿತ್ರದುರ್ಗ ನಗರದಲ್ಲಿದ್ದ ಎ6 ಜಗ್ಗ ಅಲಿಯಾಸ್ ಜಗಧೀಶ್ ಹಾಗೂ ಎ7 ಅನಿ ಅಲಿಯಾಸ್ ಅನಿಲ್ ಎಂಬ ಇಬ್ಬರು ಆರೋಪಿಗಳನ್ನ ಪೊಲಿಸರು ಬಂಧಿಸಿ ಬೆಂಗಳೂರಿಗೆ ಕರೆದೊಯ್ದಿದ್ದಾರೆ. ಚಿತ್ರದುರ್ಗ ಡಿವೈಎಸ್ಪಿ ದಿನಕರ್ ಹಾಗೂ ಕಾಮಾಕ್ಷಿಪಾಳ್ಯ ಪೊಲೀಸರು ಕಾರ್ಯಾಚರಣೆ ನಡೆಸಿ ಆರೋಪಿಗಳನ್ನ ಬಂಧಿಸಿದ್ದಾರೆ.
ರೇಣುಕಾಸ್ವಾಮಿ ಕಿಡ್ನಾಪ್ ಹಾಗೂ ಮರ್ಡರ್ ಪ್ರಕರಣದಲ್ಲಿ ಈ ಮೂಲಕ ದರ್ಶನ್ ಹಾಗೂ ಪವಿತ್ರಗೌಡ ಸೇರಿದಂತೆ 16 ಮಂದಿ ಆರೋಪಿಗಳ ಬಂಧನವಾಗಿದೆ. ಆರೋಪಿಗಳು ಸದ್ಯ ಅನ್ನಪೂರ್ಣೇಶ್ವರಿ ನಗರ ಠಾಣೆಯಲ್ಲಿದ್ದು, ವಿಚಾರಣೆ ನಡೆಯುತ್ತಿದೆ.
- Advertisement -