Sunday, October 6, 2024
spot_imgspot_img
spot_imgspot_img

ರೇಣುಕಾಸ್ವಾಮಿ ಕೊಲೆ ಪ್ರಕರಣ; ದರ್ಶನ್, ಗ್ಯಾಂಗ್‌ಗೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ..!

- Advertisement -
- Advertisement -

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ನಟ ದರ್ಶನ್ ಮತ್ತು ಗ್ಯಾಂಗ್‌ಗೆ 14 ದಿನಗಳವರೆಗೆ ನ್ಯಾಯಾಂಗ ಬಂಧನ ವಿಸ್ತರಿಸಿ 24ನೇ ಎಸಿಎಂಎಂ ಕೋರ್ಟ್ ಆದೇಶ ಹೊರಡಿಸಿದೆ.

ದರ್ಶನ್, ಪವಿತ್ರಗೌಡ ಸೇರಿದಂತೆ ಎಲ್ಲಾ ಆರೋಪಿಗಳನ್ನು ಮಂಗಳವಾರ ನ್ಯಾಯಾಧೀಶರ ಮುಂದೆ ಹಾಜರುಪಡಿಸಲಾಗಿತ್ತು. ಈ ವೇಳೆ ತನಿಖಾಧಿಕಾರಿಗಳು ನ್ಯಾಯಾಧೀಶರಿಗೆ ಟೆಕ್ನಿಕಲ್ ಸಾಕ್ಷ್ಯಗಳನ್ನು ಸಲ್ಲಿಸಿದರು. ಹಾರ್ಡ್ ಡಿಸ್ಕ್‌ನಲ್ಲಿ ಟೆಕ್ನಿಕಲ್ ಎವಿಡೆನ್ಸನ್ನು ನ್ಯಾಯಾಧೀಶರಿಗೆ ಸಲ್ಲಿಕೆ ಮಾಡಿದರು.

ದರ್ಶನ್‌ಗೆ ಬ್ಯಾಕ್‌ಪೇನ್ ಇದೆ. ಚೇರ್ ಕೊಡುವಂತೆ ಕೇಳಿದ್ದು, ಚೇರ್ ಕೊಟ್ಟಿಲ್ಲ ಅಂತಾ ದರ್ಶನ್ ಪರ ವಕೀಲರು, ನ್ಯಾಯಾಧೀಶರ ಗಮನಕ್ಕೆ ತಂದರು. ಅಲ್ಲದೇ ಕುಟುಂಬ, ಸ್ನೇಹಿತರ ಭೇಟಿಗೆ ಅವಕಾಶ ಕೊಡುತ್ತಿಲ್ಲ ಎಂದು ಸಹ ದೂರಿದರು. ಭೇಟಿಗೆ ಸಮಯ ಕೊಡಬೇಕು ಎಂದು ನ್ಯಾಯಾಧೀಶರು ಆದೇಶಿಸಿದರು.

- Advertisement -

Related news

error: Content is protected !!