Monday, June 15, 2026
spot_imgspot_img
spot_imgspot_img

ಖ್ಯಾತ ಪತ್ರಕರ್ತ ಅರ್ನಾಬ್ ಗೋ ಸ್ವಾಮಿ ಮುಂಬೈ ಪೊಲೀಸ್ ವಶಕ್ಕೆ!!

- Advertisement -
- Advertisement -

ಮುಂಬೈ(ನ.4): ಖ್ಯಾತ ಪತ್ರಕರ್ತ ಅರ್ನಾಬ್ ಗೋ ಸ್ವಾಮಿಯನ್ನು ಮುಂಬೈ ಪೊಲೀಸರು ತಮ್ಮ ವಶಕ್ಕೆ ತೆಗೆದುಕೊಂಡಿದ್ದಾರೆ. ಮನೆಗೆ ದಾಳಿ ನಡೆಸಿದ ಪೊಲೀಸರು ಗೋ ಸ್ವಾಮಿಯನ್ನು ವಶಕ್ಕೆ ಪಡೆದಿದ್ದಾರೆ. ಇದೀಗ ಅವರನ್ನು ಪೊಲೀಸ್ ಠಾಣೆಗೆ ಕರೆದೊಯ್ಯಲಾಗುತ್ತಿದೆ.

ಅರ್ನಾಬ್ ಗೋ ಸ್ವಾಮಿ ಮೇಲೆ ಪೊಲೀಸರು ಹಲ್ಲೆ ನಡೆಸಿದ್ದಾರೆ ಎಂದು ರಿಪಬ್ಲಿಕ್ ಸುದ್ದಿ ವಾಹಿನಿ ಆರೋಪಿಸಿದೆ.ವಿಚಾರಣೆ ಬಳಿಕ ಅರ್ನಾಬ್ ಅವರನ್ನು ಪೊಲೀಸರು ಬಂಧಿಸುವ ಸಾಧ್ಯತೆ ಕೂಡ ಇದೆ. ಟಿಆರ್ ಪಿ ಹಗರಣದ ತನಿಖೆ ನಡೆಸುತ್ತಿರುವ ಪೊಲೀಸರು ರಿಪಬ್ಲಿಕ್ ಸುದ್ದಿ ವಾಹಿನಿಯ ಹಲವು ಹಿರಿಯ ಸಂಪಾದಕರನ್ನು ವಿಚಾರಣೆಗೆ ಗುರಿಪಡಿಸಿದ್ದರು.

ಮನೆಗೆ ದಾಳಿ ಮಾಡಿದ ಪೊಲೀಸರು ಮನೆಯಲ್ಲಿದ್ದ ತಮ್ಮ ಅತ್ತೆ, ಮಾವ, ಪತ್ನಿ ಮತ್ತು ಮಗುವಿನ ಮೇಲೆ ಹಲ್ಲೆ ಮಾಡಿದ್ದಾರೆ ಎಂದು ರಿಪಬ್ಲಿಕ್ ಸುದ್ದಿ ವಾಹಿನಿಯ ಮುಖ್ಯ ಸಂಪಾದಕ ಅರ್ನಾಬ್ ಗೋ ಸ್ವಾಮಿ ಆರೋಪಿಸಿದ್ದಾರೆ. ಎರಡು ದಿನಗಳ ಹಿಂದೆ ಅರ್ನಾಬ್ ಗೋ ಸ್ವಾಮಿ ಸ್ಟುಡಿಯೊದಲ್ಲಿ ಬಹಿರಂಗ ಚರ್ಚೆಗೆ ಬರುವಂತೆ ಮುಂಬೈ ಪೊಲೀಸ್ ಆಯುಕ್ತ ಪರಂಬೀರ್ ಸಿಂಗ್ ಅವರಿಗೆ ಸವಾಲು ಹಾಕಿದ್ದರು.

- Advertisement -

Related news

error: Content is protected !!