Friday, April 26, 2024
spot_imgspot_img
spot_imgspot_img

ಗಣರಾಜ್ಯೋತ್ಸವಕ್ಕೆ ಬ್ರಿಟನ್ ಪ್ರಧಾನಿ ಬೋರಿಸ್ ಜಾನ್ಸನ್ ಅತಿಥಿ!!

- Advertisement -G L Acharya panikkar
- Advertisement -

ನವದೆಹಲಿ: ಮುಂದಿನ ವರ್ಷದ ಗಣರಾಜ್ಯೋತ್ಸವಕ್ಕೆ ಮುಖ್ಯ ಮುಖ್ಯ ಅತಿಥಿಯಾಗಿ ಬ್ರಿಟನ್‌ ಪ್ರಧಾನಿ ಬೋರಿಸ್‌ ಜಾನ್ಸನ್‌ ಆಗಮಿಸಲಿದ್ದಾರೆ.


ಈ ಬಗ್ಗೆ ಪ್ರಧಾನಿ ಮೋದಿಯವರೇ ನ.27ರಂದು ನಡೆದಿದ್ದ ಮಾತುಕತೆ ವೇಳೆ ಆಹ್ವಾನ ನೀಡಿದ್ದಾರೆ. ಮುಂದಿನ ವರ್ಷ ಇಂಗ್ಲೆಂಡ್‌ನ‌ಲ್ಲಿ ನಡೆಯಲಿರುವ ಜಿ 7 ರಾಷ್ಟ್ರಗಳ ಸಮ್ಮೇಳನಕ್ಕೆ ಪ್ರಧಾನಿ ಮೋದಿಯವರನ್ನು ಜಾನ್ಸನ್‌ ಆಹ್ವಾನಿಸಿದ್ದಾರೆ.

ಕೇಂದ್ರ ಸರ್ಕಾರದಿಂದ ಈ ಬಗ್ಗೆ ಅಧಿಕೃತ ಹೇಳಿಕೆ ಹೊರಬಿದ್ದಿಲ್ಲ. ಬ್ರಿಟನ್‌ ಪ್ರಧಾನಿ ಜತೆಗಿನ ಫೋನ್‌ ಮಾತುಕತೆ ಬಗ್ಗೆ ಟ್ವೀಟ್‌ ಮಾಡಿರುವ ಪ್ರಧಾನಿ ಮೋದಿ, ನನ್ನ ಸ್ನೇಹಿತ, ಯು.ಕೆ. ಪ್ರಧಾನಿ ಬೋರಿಸ್‌ ಜಾನ್ಸನ್‌ ಜತೆಗೆ ಮಾತುಕತೆ ನಡೆಸಿದ್ದೇನೆ. ಮುಂದಿನ ದಶಕಗಳಿಗೆ ಅನ್ವಯವಾಗುವಂತೆ ಭಾರತ-ಯು.ಕೆ. ನಡುವಿನ ಬಾಂಧವ್ಯವನ್ನು ಮತ್ತಷ್ಟು ವೃದ್ಧಿಸುವ ಮಾರ್ಗೋಪಾಯಗಳ ಬಗ್ಗೆ ಚರ್ಚಿಸಿದ್ದೇವೆ. ವ್ಯಾಪಾರ, ಬಂಡವಾಳ ಹೂಡಿಕೆ, ರಕ್ಷಣೆ, ಭದ್ರತೆ, ಹವಾಮಾನ ಬದಲಾವಣೆ, ಕೊರೊನಾ ಸೋಂಕು ತಡೆಗಟ್ಟುವ ಕ್ಷೇತ್ರದಲ್ಲಿ ಪರಸ್ಪರ ಸಹಕರಿಸಲು ಒಪ್ಪಿಕೊಂಡಿದ್ದೇವೆ ಎಂದು ಬರೆದುಕೊಂಡಿದ್ದಾರೆ.

ಮೋದಿಯಯವರ ಟ್ವೀಟ್‌’ಗೆ ಪ್ರತಿಯಾಗಿ ಟ್ವೀಟ್‌ ಮಾಡಿರುವ ಬೋರಿಸ್‌ ಜಾನ್ಸನ್‌, ನರೇಂದ್ರ ಮೋದಿಯವರೇ ನಿಮಗೆ ಧನ್ಯವಾದ. 2021ರಲ್ಲಿ ಭಾರತ ಮತ್ತು ಯು.ಕೆ. ನಡುವೆ ಅತ್ಯುತ್ತಮ ರೀತಿಯ ಸಹಭಾಗಿತ್ವ ಇರಲಿದೆ ಮತ್ತು ಅದು ಮತ್ತಷ್ಟು ವೃದ್ಧಿಸಲಿದೆ ಎಂದು ವಿಶ್ವಾಸ ಹೊಂದಿದ್ದೇನೆ ಎಂದು ಪ್ರತಿಕ್ರಿಯಿಸಿದ್ದಾರೆ.

- Advertisement -

Related news

error: Content is protected !!