Monday, April 29, 2024
spot_imgspot_img
spot_imgspot_img

“ಸಾಲು ಮರದ ತಿಮ್ಮಕ್ಕ ಇನ್ನಿಲ್ಲ” ಸಾಮಾಜಿಕ ಜಾಲತಾಣದಲ್ಲಿ ವೈರಲ್‌; ಸುಳ್ಳು ಸುದ್ದಿ ಹರಡದಂತೆ ಪುತ್ರನಿಂದ ಮನವಿ

- Advertisement -G L Acharya panikkar
- Advertisement -

ಬೆಂಗಳೂರು: ಅನಾರೋಗ್ಯದಿಂದಾಗಿ ರಾಷ್ಟ್ರ ಪ್ರಶಸ್ತಿ ಪುರಸ್ಕೃತೆ ಸಾಲು ಮರದ ತಿಮ್ಮಕ್ಕ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇಂತಹ ಸಂದರ್ಭದಲ್ಲಿ ಅವರು ಇನ್ನಿಲ್ಲ, ಸಾವನ್ನಪ್ಪಿದ್ದಾರೆ ಅಂತ ಸೋಷಿಯಲ್ ಮೀಡಿಯಾದಲ್ಲಿ ಸುದ್ದಿ ವೈರಲ್ ಆಗಿತ್ತು.

ಈ ಬಗ್ಗೆ ಅವರ ಪುತ್ರ ಉಮೇಶ್ ಅವರು ಮಾತನಾಡಿ, ರಾಷ್ಟ್ರ ಪ್ರಶಸ್ತಿ ಪುರಸ್ಕೃತರಾದ ಸಾಲು ಮರದ ತಿಮ್ಮಕ್ಕ ಆರೋಗ್ಯ ಸ್ಥಿರವಾಗಿದೆ. ವಯೋಸಹಜ ಆರೋಗ್ಯ ಸಮಸ್ಯೆಯಿಂದ ಚಿಕಿತ್ಸೆಗೆ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ವೈದ್ಯರ ಚಿಕಿತ್ಸೆಗೆ ಸ್ಪಂದನೆ ನೀಡುತ್ತಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಅವರು ಇನ್ನಿಲ್ಲ, ನಿಧನ ಅನ್ನೋ ಸುದ್ದಿ ಸುಳ್ಳು. ಇಂತಹ ಸುದ್ದಿಗಳನ್ನು ಹರಡಬೇಡಿ. ಅವರು ಬೇಗ ಗುಣಮುಖರಾಗುವಂತೆ ಬೇಡಿಕೊಳ್ಳುವಂತೆ ಮನವಿ ಮಾಡಿದ್ದಾರೆ.

ಉಸಿರಾಟದ ಸಮಸ್ಯೆ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಜಯನಗರದ ಅಪೋಲೋ ಆಸ್ಪತ್ರೆಗೆ ದಾಖಲಾದ ಸಾಲು ಮರದ ತಿಮ್ಮಕ್ಕ ಅವರಿಗೆ ಸದ್ಯ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಅಪೋಲೋ ಆಸ್ಪತ್ರೆ ವೈದ್ಯರು ಮಾಹಿತಿ ನೀಡಿದ್ದಾರೆ.

ಕಳೆದ ಮೂರು ತಿಂಗಳ ಹಿಂದೆಯಷ್ಟೇ ವೃಕ್ಷ ಮಾತೆಯವರು ಬೆಂಗಳೂರಿನ ತಮ್ಮ ನಿವಾಸದಲ್ಲಿ ಜಾರಿ ಬಿದ್ದು ಗಾಯಗೊಂಡು ಚಿಕಿತ್ಸೆ ಪಡೆದಿದ್ದರು. ನಂತರ ದತ್ತು ಪುತ್ರ ಬಳ್ಳೂರು ಗ್ರಾಮದ ಉಮೇಶ್ ಮನೆಯಲ್ಲಿ ವಿಶ್ರಾಂತಿ ಪಡೆಯುತ್ತಿದ್ದರು. ಸೆ. 26 ರಂದು ಉಸಿರಾಟದಲ್ಲಿ ಏರು ಪೇರಾಗಿದ್ದರಿಂದ ಬೇಲೂರಿನ ಸರ್ಕಾರಿ ಆಸ್ಪತ್ರೆ ವೈದ್ಯರು ಚಿಕಿತ್ಸೆ ನೀಡಿದ್ದರು. ಆದರೆ ಸೋಮವಾರ ರಾತ್ರಿ ಉಸಿರಾಟದಲ್ಲಿ ತೀವ್ರ ಏರು ಪೇರಾಗಿದ್ದರಿಂದ ಮಂಗಳವಾರ ಬೆಂಗಳೂರಿಗೆ ತೆರಳಿದರು.

- Advertisement -

Related news

error: Content is protected !!