Friday, July 11, 2025
spot_imgspot_img
spot_imgspot_img

ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ -ಮುಂದಿನ ವಾರ ಫಲಿತಾಂಶ ಪ್ರಕಟವಾಗುವ ನಿರೀಕ್ಷೆ

- Advertisement -
- Advertisement -

ಕರ್ನಾಟಕ ದ್ವಿತೀಯ ಪಿಯುಸಿ ಪರೀಕ್ಷೆಯ ಮೌಲ್ಯಮಾಪನ ಪ್ರಕ್ರಿಯೆ ಈ ವಾರ ಮುಕ್ತಾಯಗೊಳ್ಳಲಿದ್ದು, ಬಹುತೇಕ ಮುಂದಿನ ವಾರ ಫಲಿತಾಂಶ ಪ್ರಕಟವಾಗುವ ನಿರೀಕ್ಷೆ ಇದೆ. ಏಪ್ರಿಲ್ 11ರ ಒಳಗಾಗಿ ಫಲಿತಾಂಶ ಪ್ರಕಟವಾಗಲಿದೆ ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಲಿ ಮೂಲಗಳು ತಿಳಿಸಿವೆ. ರಾಜ್ಯದಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆಯು ಮಾರ್ಚ್ 1 ರಿಂದ 20 ರ ವರೆಗೆ ನಡೆದಿತ್ತು. ಸದ್ಯ ಮೌಲ್ಯಮಾಪನ ಪ್ರಕ್ರಿಯೆ ನಡೆಯುತ್ತಿದೆ.

ಕಳೆದ ವರ್ಷ ಸೆಕೆಂಡ್ ಪಿಯು ಫಲಿತಾಂಶವನ್ನು ಏಪ್ರಿಲ್ 10ರಂದು ಬಿಡುಗಡೆ ಮಾಡಲಾಗಿತ್ತು. ಈ ವರ್ಷವೂ ಸರಿಸುಮಾರು ಅದೇ ಹೊತ್ತಿಗೆ ಫಲಿತಾಂಶ ಪ್ರಕಟವಾಗುವ ನಿರೀಕ್ಷೆ ಇದೆ.

- Advertisement -

Related news

error: Content is protected !!