Friday, June 19, 2026
spot_imgspot_img
spot_imgspot_img

ನಿವೃತ್ತ ಪ್ರಾಧ್ಯಾಪಕ, ಪ್ರಗತಿಪರ ಚಿಂತಕ ಮಹೇಶ್‌ ಚಂದ್ರ ಗುರು ನಿಧನ..!

- Advertisement -
- Advertisement -

ಮೈಸೂರು: ಮೈಸೂರು ವಿಶ್ವವಿದ್ಯಾನಿಲಯದ ಪತ್ರಿಕೋದ್ಯಮ ವಿಭಾಗದ ನಿವೃತ್ತ ಪ್ರಾಧ್ಯಪಕ, ಪ್ರಗತಿಪರ ಚಿಂತಕ ಪ್ರೊ.ಮಹೇಶ್ ಚಂದ್ರಗುರು(67) ಹೃದಯಾಘಾತದಿಂದ ನಿಧನರಾಗಿದ್ದಾರೆ.

ಕಳೆದ ಕೆಲವು ದಿನಗಳಿಂದ ಆನಾರೋಗ್ಯದಿಂದ ಬಳಲುತ್ತಿದ್ದರು. ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಶನಿವಾರ ಸಂಜೆ 7.30ರ ಸುಮಾರಿಗೆ ತೀವ್ರ ಹೃದಯಾಘಾತದಿಂದ ಮೃತರಾಗಿದ್ದಾರೆ. ಸಾಮಾಜಿಕ ಹೋರಾಟಗಳಲ್ಲಿ ಮುಂಚೂಣಿಯಲ್ಲಿದ್ದ ಮಹೇಶ್ ಚಂದ್ರ ಗುರು ತಮ್ಮ ಹೇಳಿಕೆಗಳ ಮೂಲಕ ಹಲವು ಬಾರಿ ವಿವಾದಕ್ಕೆ ಗುರಿಯಾಗಿದ್ದರು.

ಹೈದರಾಬಾದ್‌ನಲ್ಲಿ ಸಾರ್ವಜನಿಕ ಸಂಪರ್ಕಾಧಿಕಾರಿಯಾಗಿ ವೃತ್ತಿ ಜೀವನ ಆರಂಭಿಸಿದ ಅವರು ನಂತರ ಮಂಗಳೂರು ವಿಶ್ವವಿದ್ಯಾಲಯದಲ್ಲಿ ಜರ್ನಲಿಸಂ ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸಿದರು. ನಂತರ ಮೈಸೂರು ವಿವಿಗೆ ವರ್ಗಾವಣೆಗೊಂಡು 2019ರಲ್ಲಿ ಸೇವೆಯಿಂದ ನಿವೃತ್ತರಾದರು.

- Advertisement -

Related news

error: Content is protected !!