Sunday, May 5, 2024
spot_imgspot_img
spot_imgspot_img

ರೇವಂತ್ ರೆಡ್ಡಿಗೆ ಒಲಿದ ತೆಲಂಗಾಣ ಮುಖ್ಯಮಂತ್ರಿ ಸ್ಥಾನ

- Advertisement -G L Acharya panikkar
- Advertisement -

ನಿರೀಕ್ಷಿಸಿದಂತೆ ತೆಲಂಗಾಣ ಮುಖ್ಯಮಂತ್ರಿ ಸ್ಥಾನ ರೇವಂತ್ ರೆಡ್ಡಿ ಗೆ ಒಲಿದಿದೆ. ಡಿಸೆಂಬರ್ 3ರಂದು ಚುನಾವಣಾ ಫಲಿತಾಂಶ ಪ್ರಕಟ ಆದಾಗಿನಿಂದ ಸಿಎಂ ಸ್ಥಾನಕ್ಕೆ ರೇವಂತ್ ರೆಡ್ಡಿ ಹೆಸರು ಕೇಳಿಬಂದಿತ್ತು. ಆದರೆ ಕಾಂಗ್ರೆಸ್ ಪಕ್ಷದ ಉಸ್ತುವಾರಿ ಮತ್ತು ವೀಕ್ಷಕರು ಸಿಎಂ ಹೆಸರನ್ನು ಪಕ್ಷದ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರೇ ಪ್ರಕಟಿಸುತ್ತಾರೆ ಎಂದು ಹೇಳಿದ್ದರು. ಇದೀಗ ಕಾಂಗ್ರೆಸ್ ಪಕ್ಷ ತೆಲಂಗಾಣದ ಮುಖ್ಯಮಂತ್ರಿಯಾಗಿ ರೇವಂತ್ ರೆಡ್ಡಿ ಹೆಸರು ಘೋಷಣೆ ಮಾಡಿದೆ. ಡಿಸೆಂಬರ್ 7ಕ್ಕೆ ರೇವಂತ್ ರೆಡ್ಡಿ ತೆಲಂಗಾಣ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ

ತೆಲಂಗಾಣ ಶಾಸಕಾಂಗ ಪಕ್ಷದ ನೂತನ ಸಿಎಲ್‌ಪಿಯಾಗಿ ರೇವಂತ್ ರೆಡ್ಡಿ ಅವರನ್ನು ಆಯ್ಕೆ ಮಾಡಲು ಕಾಂಗ್ರೆಸ್ ಅಧ್ಯಕ್ಷರು ನಿರ್ಧರಿಸಿದ್ದಾರೆ. ರೇವಂತ್ ರೆಡ್ಡಿ ಪಿಸಿಸಿ ಅಧ್ಯಕ್ಷರಾಗಿ ಕೆಲಸ ಮಾಡುತ್ತಿದ್ದಾರೆ. ಅವರು ಇತರ ಹಿರಿಯ ನಾಯಕರೊಂದಿಗೆ ವ್ಯಾಪಕ ಪ್ರಚಾರ ಮಾಡಿದ ಕ್ರಿಯಾತ್ಮಕ ನಾಯಕ. ತೆಲಂಗಾಣ ಜನತೆಯ ಆಕಾಂಕ್ಷೆಗಳು ಮತ್ತು ಅವರಿಗೆ ನೀಡಿರುವ ಭರವಸೆಗಳನ್ನು ಈಡೇರಿಸುವುದು ಈ ಸರ್ಕಾರದ ಮೊದಲ ಮತ್ತು ಪ್ರಮುಖ ಆದ್ಯತೆಯಾಗಿದೆ ಎಂದು ನಮಗೆ ಖಚಿತವಾಗಿದೆ ಎಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಎಐಸಿಸಿ ಪ್ರಧಾನ ಕಾರ್ಯದರ್ಶಿ ವೇಣುಗೋಪಾಲ್ ಹೇಳಿದ್ದಾರೆ.

- Advertisement -

Related news

error: Content is protected !!