Monday, August 10, 2026
spot_imgspot_img
spot_imgspot_img

ರಸ್ತೆ ಅಪಘಾತ; ಯುವಕರಿಬ್ಬರು ಸ್ಥಳದಲ್ಲೇ ಸಾವು

- Advertisement -
- Advertisement -

ಅಪರಿಚಿತ ವಾಹನ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಬೈಕ್ ಸವಾರರು ಸ್ಥಳದಲ್ಲೇ ಮೃತಪಟ್ಟ ಘಟನೆ ಕೆ.ಆರ್.ಪೇಟೆ ತಾಲ್ಲೂಕಿನ ಹಿರೀಕಳಲೆ ಗ್ರಾಮದ ಬಳಿ ಮೈಸೂರು- ಹಾಸನ ರಾಜ್ಯ ಹೆದ್ದಾರಿಯಲ್ಲಿ ನಡೆದಿದೆ.

ಹಿರೀಕಳಲೆ ಗ್ರಾಮದ ಸಂದೇಶ್ (25), ಮರಡಹಳ್ಳಿಯ ಭರತ್ (23) ಮೃತಪಟ್ಟವರು.

ಎಳನೀರು ವ್ಯಾಪಾರ ಮಾಡುತ್ತಿದ್ದ ಯುವಕರು ರಾತ್ರಿ 10 ಗಂಟೆ ಸಮಯದಲ್ಲಿ ಕೆ.ಆರ್.ಪೇಟೆಯಿಂದ ಕಿಕ್ಕೇರಿ ಕಡೆ ಬರುವಾಗ ಘಟನೆ ನಡೆದಿದೆ. ಅಪರಿಚಿತ ವಾಹನ ಡಿಕ್ಕಿ ಹೊಡೆದು ಪರಾರಿಯಾಗಿರುವ ಸಾಧ್ಯತೆ ಇದೆ, ವಾಹನ ಪತ್ತೆಗೆ ಸಿಸಿಟಿವಿ ಕ್ಯಾಮೆರಾ ಪರಿಶೀಲಿಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಕಿಕ್ಕೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Related news

error: Content is protected !!