- Advertisement -
- Advertisement -
ವಿಟ್ಲ ಸಾಲೆತ್ತೂರು ರಸ್ತೆಯ ಕುಡ್ತ ಮುಗೇರುವಿನ ಸೇತುವೆ ಅಪಾಯದ ಮಟ್ಟ ಮೀರಿ ಹರಿಯುತ್ತಿದ್ದು, ಸೇತುವೆ ಮುಳುಗಡೆಯಾಗಿದೆ.
ಸೇತುವೆ ನೀರು ರಸ್ತೆಯ ಮೇಲೆ ಹರಿದಾಡುತ್ತಿದ್ದು, ವಾಹನ ಸಂಚಾರಕ್ಕೆ ಅಡಚಣೆಯಾಗಿದೆ. ಈ ಬಗ್ಗೆ ಮುನ್ನೆಚ್ಚರಿಕಾ ಕ್ರಮವಾಗಿ ವಾಹನ ಸವಾರರು ಬದಲಿ ರಸ್ತೆಯನ್ನು ಅನುಸರಿಸುವಂತೆ ಅಧಿಕಾರಿಗಳು ತಿಳಿಸಿದ್ದಾರೆ.
ಸೇತುವೆಯ ರಸ್ತೆಯ ಎರಡೂ ಕಡೆ ರಿಬ್ಬನ್ ಕಟ್ಟಿ ರಸ್ತೆಯನ್ನು ತಾತ್ಕಾಲಿಕವಾಗಿ ಬಂದ್ ಮಾಡಿ ವಾಹನ ಸಂಚಾರ ಸ್ಥಗಿತಗೊಳಿಸಲಾಗಿದೆ. ನಾಳೆ ನೀರಿನ ಪ್ರಮಾಣ ಕಡಿಮೆ ಆಗುವವರೆಗೂ ಯಾರು ಈ ರಸ್ತೆಯಲ್ಲಿ ಸಂಚರಿಸದಂತೆ ವಿಟ್ಲ ಠಾಣೆ ಪೊಲೀಸರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ
- Advertisement -