Thursday, September 3, 2026
spot_imgspot_img
spot_imgspot_img

25.5 ಲಕ್ಷ ರೂಪಾಯಿ ಅನುದಾನದಲ್ಲಿ ಅಭಿವೃದ್ಧಿಗೊಂಡ ರಸ್ತೆ ಉದ್ಘಾಟಿಸಿದ ಶಾಸಕ ಡಾ.ವೈ ಭರತ್ ಶೆಟ್ಟಿ

- Advertisement -
- Advertisement -

ಮಂಗಳೂರು: ಮಂಗಳೂರು ನಗರ ಉತ್ತರ ವಿಧಾನಸಭಾ ಕ್ಷೇತ್ರದ ಪಾಲಿಕೆ ವ್ಯಾಪ್ತಿಯ ವಾರ್ಡ್ 22 ರ ಕದ್ರಿ ಬಿ ಪದವು ವಾರ್ಡಿನ ನೂತನವಾಗಿ ಕಾಂಕ್ರೀಟಿಕರಣಗೊಂಡು ಅಭಿವೃದ್ಧಿಗೊಂಡಿರುವ ಬಾಂದೊಟ್ಟು- ಗಾಂಧೀಜಿ ರಸ್ತೆಯನ್ನು ಶಾಸಕರಾದ ಡಾ. ವೈ ಭರತ್ ಶೆಟ್ಟಿಯವರು ಉದ್ಘಾಟಿಸಿದರು.

25.5 ಲಕ್ಷ ರೂಪಾಯಿ ಅನುದಾನದಲ್ಲಿ ಈ ರಸ್ತೆ ಸಂಪೂರ್ಣ ಅಭಿವೃದ್ಧಿಯಾಗಿದೆ. ಶಾಸಕರ 2019-20 ರ ಸಾಲಿನ ಪ್ರದೇಶಾಭಿವೃದ್ಧಿ ಯೋಜನೆಯ ಅನುದಾನದಲ್ಲಿ ಈ ರಸ್ತೆಗೆ ಅನುದಾನವನ್ನು ಒದಗಿಸಲಾಗಿದೆ.

ಈ ಸಂದರ್ಭದಲ್ಲಿ ಪಾಲಿಕೆಯ ಸ್ಥಳೀಯ ಕಾರ್ಪೋರೇಟರ್ ಜಯಾನಂದ ಅಂಚನ್, ಮಂಗಳೂರು ಮಹಾನಗರ ಪಾಲಿಕೆ ಕಾರ್ಯಪಾಲಕ ಇಂಜಿನಿಯರ್ ರಘುಪಾಲ್, ಯುವಮೋರ್ಚಾ ಪ್ರಧಾನ ಕಾರ್ಯದರ್ಶಿ ಸಂಜೀತ್ ಶೆಟ್ಟಿ, ಬೂತ್ ಅಧ್ಯಕ್ಷರಾದ ಕಾರ್ತಿಕ್ ನಾಯಕ್, ಬೂತ್ ಕಾರ್ಯದರ್ಶಿ ಜಯಪ್ರಕಾಶ್ ಭಟ್, ಪಕ್ಷದ ಪ್ರಮುಖರಾದ ಗುರುರಾಜ್ ಭಟ್, ಚಂದ್ರಣ್ಣ, ಹರಿಪ್ರಸಾದ್, ಜಯರಾಮ್ ಶೆಟ್ಟಿ, ಅಶ್ವಥ್, ಹಾಗೂ ಸ್ಥಳೀಯರು ಉಪಸ್ಥಿತರಿದ್ದರು.

- Advertisement -

Related news

error: Content is protected !!