- Advertisement -
- Advertisement -
ಬಿಜೈ ಕೆ.ಎಸ್.ಆರ್.ಟಿ.ಸಿ – ಲಾಲ್ ಭಾಗ್ ನಡುವಿನ ರಸ್ತೆಯ ಅಂಗಡಿ ಮಾಲೀಕರು ಹಾಗೂ ಸಾರ್ವಜನಿಕರು ಸುಮಾರು ವರ್ಷ ಗಳಿಂದ ವಿರೋಧ ವ್ಯಕ್ತಪಡಿಸುತ್ತಿದ್ದರು. ಆದರೆ ಮಂಗಳೂರು ದಕ್ಷಿಣ ಕ್ಷೇತ್ರದ ಶಾಸಕ ವೇದವ್ಯಾಸ್ ಕಾಮತ್ ಪ್ರಯತ್ನ ಹಾಗೂ ಅಗಲೀಕರಣಕ್ಕೆ ಭರವಸೆಯ ಮೇರೆಗೆ ಅಂಗಡಿ ಮಾಲಕರು ತಮ್ಮ ಜಾಗ ಬಿಟ್ಟುಕೊಡಲು ಒಪ್ಪಿಗೆ ನೀಡಿದ್ದಾರೆ.
ಸುಮಾರು 15 ವರ್ಷಗಳಿಂದ ಕಗ್ಗಂಟಾಗಿದ್ದ ಈ ಪ್ರಕ್ರಿಯೆಗೆ ಶಾಸಕ ವೇದವ್ಯಾಸ್ ಕಾಮತ್ ಮರು ಜೀವ ತುಂಬಿದ್ದಾರೆ. ಅಲ್ಲಿನ ಸಾರ್ವಜನಿಕರ ಜೊತೆ ಸಭೆ ನಡೆಸಿ ಯಾವುದೇ ಸಮಸ್ಯೆಯಾಗದ ರೀತಿ ಕಾಮಗಾರಿ ನಡೆಸುತ್ತೇವೆ ಎಂದ ಬಳಿಕ ಸಮ್ಮತಿಸಿದ್ದಾರೆ. ಶೀಘ್ರವೇ ಕಾಮಗಾರಿ ಕೈಗೆತ್ತಿಕೊಂಡು ಪೂರ್ಣಗೊಳಿಸಲಾಗುವುದು ಎಂದು ಶಾಸಕ ಕಾಮತ್ ತಿಳಿಸಿದ್ದಾರೆ.
ಈ ಸಂಧರ್ಭದಲ್ಲಿ ಸ್ಥಳೀಯ ಬಿಜೆಪಿ ಮುಖಂಡರು, ಸ್ಮಾರ್ಟ್ ಸಿಟಿ ಅಧಿಕಾರಿಗಳು, ಮಂಗಳೂರು ಮಹಾನಗರ ಪಾಲಿಕೆ ಅಧಿಕಾರಿಗಳು ಉಪಸ್ಥಿತರಿದ್ದರು.
- Advertisement -