Monday, February 10, 2025
spot_imgspot_img
spot_imgspot_img

ಬೆಂಕಿಯಲ್ಲಿ ಹೊತ್ತಿ ಉರಿದ ರಸ್ತೆ ಬದಿಯ ಅಂಗಡಿಗಳು

- Advertisement -
- Advertisement -

ಮಂಡ್ಯ: ಬೀದಿ ಬದಿಯಲ್ಲಿದ್ದ ಹಣ್ಣಿನ ಅಂಗಡಿಗಳು ಸೇರಿದಂತೆ ಇತರೆ ಹಲವು ಅಂಗಡಿಗಳು ಆಕಸ್ಮಿಕವಾಗಿ ಬೆಂಕಿಗಾಹುತಿಯಾದ ಘಟನೆ ಮಂಡ್ಯದಹೊಳಲು ಸರ್ಕಲ್‌ನಲ್ಲಿ ನಡೆದಿದೆ. ಬೆಳಗ್ಗಿನ ಜಾವ ಹೊಳಲು ಸರ್ಕಲ್‌ನಲ್ಲಿ ರಸ್ತೆ ಬದಿಯಲ್ಲಿದ್ದ ಹಣ್ಣಿನ ಅಂಗಡಿಯೊಂದರಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಈ ವೇಳೆ ಬೆಂಕಿಯ ತೀವ್ರತೆಯಿಂದ ಪಕ್ಕದಲ್ಲೇ ಇದ್ದ ಮತ್ತೊಂದು ಅಂಗಡಿಯು ಸುಟ್ಟು ಕರಕಲಾಗಿವೆ.

ಕೂಡಲೇ ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿಗಳ ತಂಡ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಮಹದೇವ, ರಾಧಮ್ಮ ಎಂಬವರಿಗೆ ಸೇರಿದ ಎರಡು ಅಂಗಡಿಗಳು ಸುಟ್ಟು ಕರಕಲಾಗಿವೆ ಎಂದು ತಿಳಿದು ಬಂದಿದೆ. ಯಾರೋ ಕಿಡಿಗೇಡಿಗಳು ಬೆಂಕಿ ಹಚ್ಚಿರುವ ಅನುಮಾನವನ್ನು ಸ್ಥಳೀಯರು ವ್ಯಕ್ತಪಡಿಸಿದ್ದಾರೆ. ಬೆಂಕಿಯ ಕೆನ್ನಾಲೆಗೆ ಸುಟ್ಟು ಕರಕಲಾಗಿರುವ ಅಂಗಡಿಗಳ ಮಾಲೀಕರಿಗೆ ಸೂಕ್ತ ಪರಿಹಾರ ನೀಡುವಂತೆ ಆಗ್ರಹಿಸಿದ್ದಾರೆ. ಈ ಕುರಿತು ಸೆಂಟ್ರಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Related news

error: Content is protected !!