Tuesday, July 21, 2026
spot_imgspot_img
spot_imgspot_img

ಪ್ರಿಯಕರನ ಜೊತೆ ಸೇರಿ ಗಂಡನ ಮನೆಯಲ್ಲಿ ಕಳ್ಳತನ–21 ಲಕ್ಷ ಮೌಲ್ಯದ ಚಿನ್ನಾಭರಣ ಕಳವು!

- Advertisement -
- Advertisement -

ಬೆಳಗಾವಿ: ಪ್ರಿಯಕರನ ಜೊತೆ ಓಡಿಹೋಗಲು ಪತಿ ಮನೆಗೆ ಕನ್ನ ಹಾಕಿದ್ದ ಪತ್ನಿಯನ್ನು ಪೊಲೀಸರು ಬಂಧಿಸಿರುವ ಘಟನೆ ಬೆಳಗಾವಿ ಜಿಲ್ಲೆಯ ರಾಮದುರ್ಗ ತಾಲೂಕಿನ ಹೊಸಕೋಟಿ ಗ್ರಾಮದಲ್ಲಿ ನಡೆದಿದೆ.

ಪ್ರಿಯಕರನ ಜೊತೆ ಸೇರಿದ ಹೈನಾತಿ ಪತ್ನಿ ಗಂಡನ ಮನೆಯಲ್ಲಿಯೇ 21 ಲಕ್ಷ ಮೌಲ್ಯದ ‌154.6 ಗ್ರಾಂ ಚಿನ್ನಾಭರಣ ಕಳ್ಳತನ ಮಾಡಿದ್ದು, ಈಗ ಪೊಲೀಸರ ಅತಿಥಿಯಾಗಿದ್ದಾಳೆ. ಹಣಮಂತ ಮಾರಾಪೂರ, ಹಸೀನಾ ನದಾಫ್ ಬಂಧಿತರು. ಬಂಧಿತರಿಂದ 11 ಸಾವಿರ ಮೌಲ್ಯದ 45 ಗ್ರಾಂ ಬೆಳ್ಳಿಯ ಆಭರಣ ವಶಕ್ಕೆ ಪಡೆದುಕೊಂಡಿದ್ದಾರೆ.

ಕಳ್ಳತನದ ಬಗ್ಗೆ ದಿಲ್ಶಾನ್‌ ನದಾಫ್ ಎಂಬುವವರು ಕಟಕೋಳ ಠಾಣೆಗೆ ದೂರು ನೀಡಿದ್ದು, ದೂರು ಪಡೆದ ಪೊಲೀಸರು ಕೃತ್ಯ ನಡೆದ 48 ಗಂಟೆಯಲ್ಲಿ ಕಳ್ಳತನ ಮಾಡಿದ್ದ ಪ್ರೇಮಿಗಳನ್ನ ಬಂಧಿಸಿದ್ದಾರೆ.

ಹಸೀನಾ ಮೂಲತಃ ಮೂಡಲಗಿ ತಾಲೂಕಿನವಳು. ಕಳೆದ ಎರಡು ತಿಂಗಳ ಹಿಂದೆ ಹೊಸಕೋಟಿ ಗ್ರಾಮದ ಶರೀಫ್ ಜೊತೆಗೆ ಮದುವೆಯಾಗಿತ್ತು‌. ಮದುವೆಯ ನಂತರವೂ ಸಹ ಪ್ರಿಯಕರನ ಸಂಪರ್ಕದಲ್ಲಿ ಹಸೀನಾ ಇದ್ದಳು. ಕೊನೆಗೆ ಪ್ರಿಯಕರನ ಜೊತೆ ಓಡಿಹೋಗುವ ಪ್ಲ್ಯಾನ್‌ ಮಾಡಿದ್ದ ಆಕೆ ಗಂಡನ ಮನೆಗೆ ಕನ್ನ ಹಾಕಿದ್ದಳು. ಪೊಲೀಸರು ಇಬ್ಬರನ್ನು ಬಂಧಿಸಿ ಜೈಲಿಹಟ್ಟಿದ್ದಾರೆ.

ಈ ಕುರಿತು ರಾಮದುರ್ಗ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಪೊಲೀಸರ ಕಾರ್ಯಕ್ಕೆ ಎಸ್ಪಿ ಕೆ ರಾಮರಾಜನ್ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ ಎಂಬುದಾಗಿ ವರದಿ ಮುಲಕ ತಿಳಿದುಬಂದಿದೆ.

- Advertisement -

Related news

error: Content is protected !!