Thursday, July 30, 2026
spot_imgspot_img
spot_imgspot_img

*ಪೆರ್ನೆ ಅಡಿಕೆ ವ್ಯಾಪಾರಿಗೆ ಚೂರಿ ಇರಿದು ನಾಲ್ಕು ಲಕ್ಷ ದೋಚಿ ದುಷ್ಕರ್ಮಿಗಳು ಪರಾರಿ.!!*

- Advertisement -
- Advertisement -

ಅಡಿಕೆ ವ್ಯಾಪಾರಿಯೊಬ್ಬರಿಗೆ ಬೈಕ್ ನಲ್ಲಿ ಬಂದ ನಾಲ್ವರು ಅಪರಿಚಿತರು ಚೂರಿಯಿಂದ ಇರಿದು ನಾಲ್ಕು ಲಕ್ಷ ದೋಚಿ ಪರಾರಿಯಾದ ಘಟನೆ ಪೆರ್ನೆಯಲ್ಲಿ ನಡೆದಿದೆ.

ಅಡಿಕೆ ವ್ಯಾಪಾರಿ ದೀಪಕ್ ಶೆಟ್ಟಿ ಅವರು ಎಂದಿನಂತೆ ಪೆರ್ನೆಯಲ್ಲಿರುವ ತಮ್ಮ ಅಡಿಕೆ ಅಂಗಡಿಯನ್ನು ಮುಚ್ಚಿ ಮನೆಯತ್ತ ಬೈಕ್ ನಲ್ಲಿ ತೆರಳುತ್ತಿದ್ದ ವೇಳೆ ಈ ಕೃತ್ಯ ನಡೆದಿದೆ. ದೀಪಕ್ ಅವರ ಮನೆಯಿಂದ ಕೆಲವೇ ದೂರದಲ್ಲಿರುವ ಮಠಂದಬೆಟ್ಟು ಎಂಬಲ್ಲಿ ಬೈಕ್ ನಲ್ಲಿ ಬಂದ ನಾಲ್ವರು ಅಪರಿಚಿತರು ಚೂರಿಯಿಂದ ತಲೆ ಹಾಗೂ ಹೊಟ್ಟೆಯ ಭಾಗಕ್ಕೆ ತೀವ್ರವಾಗಿ ದಾಳಿ ನಡೆಸಿದ್ದು, ಘಟನೆಯಲ್ಲಿ ದೀಪಕ್ ಶೆಟ್ಟಿ ಗಾಯಗೊಂಡಿದ್ದಾರೆ. ಈ ವೇಳೆ ದೀಪಕ್ ಶೆಟ್ಟಿ ಅವರ ಬಳಿಯಿದ್ದ ನಾಲ್ಕು ಲಕ್ಷ ರೂಪಾಯಿಗಳನ್ನು ದೋಚಿದ ಕಳ್ಳರು ಪರಾರಿಯಾಗಿದ್ದಾರೆ ಎನ್ನಲಾಗಿದೆ. ಗಾಯಗೊಂಡ ದೀಪಕ್ ಶೆಟ್ಟಿ ಅವರನ್ನು ಆಸ್ಪತ್ರೆಗೆ ಸಾಗಿಸಲಾಗಿದೆ ಎಂದು ತಿಳಿದು ಬಂದಿದೆ.

- Advertisement -

Related news

error: Content is protected !!