- Advertisement -
- Advertisement -



ಟೀ ಕುಡಿಯಲು ಬೇಕರಿ ಬಳಿ ಬಂದ ರೌಡಿಶೀಟರ್ ಬರ್ಬರವಾಗಿ ಹತ್ಯೆಯಾಗಿರುವ ಘಟನೆ ಬೆಂಗಳೂರಿನ ಚುಂಚನಘಟ್ಟ ಮುಖ್ಯರಸ್ತೆಯಲ್ಲಿ ನಡೆದಿದೆ.
ಕೊಲೆಯಾದ ವ್ಯಕ್ತಿ ಕೋಣನಕುಂಟೆ ಠಾಣೆ ವ್ಯಾಪ್ತಿಯ ಸಹದೇವ್ ರೌಡಿಶೀಟರ್ ಎಂದು ಗುರುತಿಸಲಾಗಿದೆ.
ಪುಟ್ಟೇನಹಳ್ಳಿ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಟೀ ಕುಡಿಯಲು ಬೇಕರಿ ಬಳಿ ರೌಡಿಶೀಟರ್ ಸಹದೇವ್ ಬಂದಿದ್ದ. ಈ ವೇಳೆ ಮೂರು ಬೈಕ್‌ನಲ್ಲಿ ಬಂದಿದ್ದ ಆರು ಮಂದಿ ದಾಳಿ ನಡೆಸಿದ್ದಾರೆ. ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿ ಕ್ಷಣಾರ್ಧದಲ್ಲಿ ಬೈಕ್‌ನಲ್ಲಿ ಪರಾರಿಯಾಗಿದ್ದಾರೆ. ಘಟನಾ ಸ್ಥಳಕ್ಕೆ ಪುಟ್ಟೇನಹಳ್ಳಿ ಪೊಲೀಸರ ಭೇಟಿ ಪರಿಶೀಲನೆ ನಡೆಸಿದ್ದಾರೆ. ಆರೋಪಿಗಳ ಪತ್ತೆಗೆ ಬಲೆ ಬೀಸಿದ್ದಾರೆ.
- Advertisement -








