Sunday, June 7, 2026
spot_imgspot_img
spot_imgspot_img

ರೌಡಿ ಶೀಟರ್ ಮೇಲೆ ಪೊಲೀಸರಿಂದ ಫೈರಿಂಗ್!

- Advertisement -
- Advertisement -

ಬೆಂಗಳೂರು: ಬೆಂಗಳೂರಿನ ಓಕಳಿಪುರಂ ಬಳಿ 15ಕ್ಕೂ ಹೆಚ್ಚು ಪ್ರಕರಣಗಳಲ್ಲಿ ಆರೋಪಿಯಾಗಿರುವ ರೌಡಿ ಶೀಟರ್ ನೊಬ್ಬನನ್ನು ಬಂಧಿಸಲು ಪೊಲೀಸರು ಫೈರಿಂಗ್ ಮಾಡಿದ್ದಾರೆ.

ನಂದಿನಿ ಲೇ ಔಟ್ ಪೊಲೀಸರು ಆರೋಪಿ ಗುಂಡ ಯಾನೆ ಕಾರ್ತಿಕನನ್ನು ಬಂಧಿಸಲು ತೆರಳಿದ್ದ ವೇಳೆ ಆರೋಪಿ ಪೊಲೀಸರ ಮೇಲೆ ಹಲ್ಲೆ ನಡೆಸಿದ್ದ ಎಂದು ಆರೋಪಿಸಲಾಗಿದೆ. ಬಳಿಕ ಆತ್ಮ ರಕ್ಷಣೆಗಾಗಿ ಪೊಲೀಸರು ಗುಂಡಿನ ದಾಳಿ ನಡೆಸಿದ್ದಾರೆ ಎಂದು ವರದಿಯಾಗಿದೆ.

ಸಬ್ ಇನ್ಸ್ ಪೆಕ್ಟರ್ ನಿತ್ಯಾನಂದ ನೇತೃತ್ವದಲ್ಲಿ ಪೊಲೀಸರು ಈ ಕಾರ್ಯಾಚರಣೆ ನಡೆಸಿದ್ದಾರೆ. ಆರೋಪಿ ಕಾರ್ತಿಕ್ ಕಾಲಿಗೆ ಗುಂಡು ತಗುಲಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ.

- Advertisement -

Related news

error: Content is protected !!