- Advertisement -
- Advertisement -
ಬೆಂಗಳೂರು: ರಾಜರಾಜೇಶ್ವರಿ ನಗರ ಹಾಗೂ ಶಿರಾ ಉಪಚುನಾವಣೆಯಲ್ಲಿ ಚುನಾಯಿತರಾದ ನೂತನ ಬಿಜೆಪಿ ಶಾಸಕರಾದ ಮುನಿರತ್ನ ನಾಯ್ಡು ಹಾಗೂ ರಾಜೇಶ್ ಗೌಡ ಇಂದು ಪ್ರಮಾಣವಚನ ಸ್ವೀಕಾರ ಮಾಡಿದರು.
ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಸಮ್ಮುಖದಲ್ಲಿ ಕಾರ್ಯಕ್ರಮ ನಡೆಯಿತು. ಮುನಿರತ್ನ, ರಾಜರಾಜೇಶ್ವರಿ ದೇವಿಯ ಹೆಸರಿನ ಮೇಲೆ ಪ್ರಮಾಣ ವಚನ ಸ್ವೀಕಾರ ಮಾಡಿದರು.
ರಾಜೇಶ್ ಗೌಡ ಭಗವಂತನ ಹೆಸರಿನ ಮೇಲೆ ಪ್ರಮಾಣ ವಚನ ಸ್ವೀಕರಿಸಿದರು.ಕಾರ್ಯಕ್ರಮದಲ್ಲಿ ವಿಧಾನಸಭಾ ಸಚಿವಾಲಯದ ಕಾರ್ಯದರ್ಶಿ ಎಂ.ಕೆ ವಿಶಾಲಾಕ್ಷಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.ರಾಜರಾಜೇಶ್ವರಿ ನಗರ ಕ್ಷೇತ್ರದಲ್ಲಿ 58 ಸಾವಿರ ಮತಗಳಿಂದ ಮುನಿರತ್ನ ಹಾಗೂ ಶಿರಾ ಕ್ಷೇತ್ರದಲ್ಲಿ 13 ಸಾವಿರ ಮತಗಳಿಂದ ರಾಜೇಶ್ ಗೌಡ ಜಯಸಾಧಿಸಿದ್ದರು.
- Advertisement -