Wednesday, July 22, 2026
spot_imgspot_img
spot_imgspot_img

ಡಿಜಿಟಲ್ ಅರೆಸ್ಟ್ ಮೂಲಕ 15.45 ಕೋಟಿ ರೂ. ವಂಚನೆ; ಇಬ್ಬರ ಬಂಧನ

- Advertisement -
- Advertisement -

ಬೆಳಗಾವಿ : ನಗರದಲ್ಲಿರುವ ಉದ್ಯಮಿಯೊಬ್ಬರನ್ನು ‘ಡಿಜಿಟಲ್ ಅರೆಸ್ಟ್ ಮಾಡಿ 15.45 ಕೋಟಿ ರೂ. ವಂಚಿಸಿದ್ದ ಪ್ರಕರಣದಲ್ಲಿ ಇಬ್ಬರು ಆರೋಪಿಗಳನ್ನು ಬೆಳಗಾವಿ ಸೈಬರ್ ಕ್ರೈಂ ಪೊಲೀಸರು ಬಂಧಿಸಿದ್ದಾರೆ.

ಉದ್ಯಮಿ ಅಜಿತ್ ಗೋಪಾಲಕೃಷ್ಣ ಅವರನ್ನು ಫೆಬ್ರವರಿ 7ರಿಂದ ಮಾರ್ಚ್ 9ರವರೆಗೆ ವಂಚಕರು ಡಿಜಿಟಲ್ ಅರೆಸ್ಟ್ ಮಾಡಿದ್ದರು. ಈ ಅವಧಿಯಲ್ಲಿ ಹಂತ ಹಂತವಾಗಿ ಅವರ ಬ್ಯಾಂಕ್ ಖಾತೆಯಿಂದ ಒಟ್ಟು 15.45 ಕೋಟಿ ರೂ. ವರ್ಗಾಯಿಸಿಕೊಂಡಿದ್ದರ ಕುರಿತು ಬೆಳಗಾವಿ ಸೈಬರ್ ಕ್ರೈಂ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಪ್ರಕರಣದ ತನಿಖೆ ಕೈಗೊಂಡ ಸೈಬರ್ ಕಮಾಂಡ್ ಅಧಿಕಾರಿಗಳು ವೆಂಕದೋತ ಶರತ್ ನಾಯಕ್ ಹಾಗೂ ದೇಗಾವತ ಶ್ರೀಪಾದ ನಾಯಕ್ ಎಂಬ ಇಬ್ಬರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಬಂಧಿತ ಆರೋಪಿಗಳ ಬ್ಯಾಂಕ್ ಖಾತೆಗಳಿಂದ ಸುಮಾರು 2 ಕೋಟಿ ರೂ.ಜಪ್ತಿ ಮಾಡಲಾಗಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಳಗಾವಿ ಸೈಬರ್ ಕ್ರೈಂ ಪೊಲೀಸರು ಹೆಚ್ಚಿನ ತನಿಖೆ ಮುಂದುವರಿಸಿದ್ದಾರೆ ಎಂಬುದಾಗಿ ವರದಿ ಮೂಲಕ ತಿಳಿದುಬಂದಿದೆ.

- Advertisement -

Related news

error: Content is protected !!