Sunday, June 7, 2026
spot_imgspot_img
spot_imgspot_img

ಅರ್ಹ ಮಹಿಳೆಯರಿಗೆ ತಿಂಗಳಿಗೆ 2,500 ರೂ. – ದೆಹಲಿ ಬಜೆಟ್‌ನಲ್ಲಿ ಸಿಎಂ ರೇಖಾ ಗುಪ್ತಾ ಘೋಷಣೆ

- Advertisement -
- Advertisement -

ನವದೆಹಲಿ: ದೆಹಲಿಯಲ್ಲಿ ಹೊಸದಾಗಿ ಆಯ್ಕೆಯಾದ ಬಿಜೆಪಿ ಸರ್ಕಾರವು 26 ವರ್ಷಗಳ ಬಳಿಕ ದೆಹಲಿ ವಿಧಾನಸಭೆಯಲ್ಲಿ ತನ್ನ ಮೊದಲ ಬಜೆಟ್ ಮಂಡಿಸಿದೆ.

ದೆಹಲಿ ಮುಖ್ಯಮಂತ್ರಿ ಮತ್ತು ಹಣಕಾಸು ಸಚಿವೆ ರೇಖಾ ಗುಪ್ತಾ 2025-26 (FY26) ಹಣಕಾಸು ವರ್ಷದ ಬಜೆಟ್ ಅನ್ನು ಮಂಡಿಸಿದ್ದಾರೆ. ಬಜೆಟ್‌ನಲ್ಲಿ ಅರ್ಹ ಮಹಿಳೆಯರಿಗೆ ತಿಂಗಳಿಗೆ 2,500 ಪಾವತಿಸಲು ಸರ್ಕಾರ 5,100 ಕೋಟಿ ಹಣವನ್ನು ನಿಗದಿಪಡಿಸಿದೆ.

ದೆಹಲಿಯ ಈ ಬಾರಿಯ ಬಜೆಟ್‌ 2025 ಹಿಂದಿನ ಬಜೆಟ್‌ಗಿಂತ ಶೇ. 31.5 ರಷ್ಟು ಹೆಚ್ಚಳ ಕಂಡಿದೆ. FY26 ರ ಬಂಡವಾಳ ವೆಚ್ಚವನ್ನು ದ್ವಿಗುಣಗೊಳಿಸಿ 28,000 ಕೋಟಿ ರೂ.ಗೆ ಹೆಚ್ಚಿಸಲಾಗಿದೆ. ಪ್ರಧಾನ ಮಂತ್ರಿ ಜನ ಆರೋಗ್ಯ ಯೋಜನೆಗೆ 2,144 ಕೋಟಿ ರೂ. ಹಂಚಿಕೆ ಮಾಡಲಾಗಿದೆ ಎಂದು ಸಿಎಂ ಗುಪ್ತಾ ಹೇಳಿದ್ದಾರೆ.

ಆಯುಷ್ಮಾನ್ ಭಾರತ್ ಯೋಜನೆಯಲ್ಲಿ ದೆಹಲಿಯ ಜನರಿಗೆ ಈಗ 10 ಲಕ್ಷ ರೂ. ವಿಮಾ ರಕ್ಷಣೆ ಸಿಗಲಿದೆ. ಕೇಂದ್ರದ 5 ಲಕ್ಷ ರೂ. ವಿಮಾ ರಕ್ಷಣೆಯ ಜೊತೆಗೆ, ದೆಹಲಿಯ ಜನರಿಗೆ 5 ಲಕ್ಷ ಟಾಪ್-ಅಪ್ ನೀಡಲಾಗುವುದು ಎಂದು ಸಿಎಂ ಘೋಷಿಸಿದ್ದಾರೆ.

- Advertisement -

Related news

error: Content is protected !!