Monday, May 6, 2024
spot_imgspot_img
spot_imgspot_img

ಕಾಸರಗೋಡು : 7.25 ಕೋಟಿ ರೂ ಖೋಟಾ ನೋಟು ಪತ್ತೆ ಪ್ರಕರಣ : ಸುಳ್ಯದ ವ್ಯಕ್ತಿಯ ಸಹಿತ ಇಬ್ಬರು ವಶ

- Advertisement -G L Acharya panikkar
- Advertisement -

ಕಾಸರಗೋಡು: ಕಾಂಜ್ಞಾಗಾಡ್ ಸಮೀಪದ ಅಂಬಲತ್ತರ ಪಾರಪಳ್ಳಿ ಗುರುಪುರದ ಬಾಡಿಗೆ ಮನೆಯೊಂದರಲ್ಲಿ ರೂ 2 ಸಾವಿರ ಮುಖಬೆಲೆಯ 7.25 ಕೋಟಿ ರೂ ಪತ್ತೆಯಾಗಿದ್ದು, ಪರಿಶೀಲನೆಯ ವೇಳೆ ಇವೆಲ್ಲವು ಖೋಟಾ ನೋಟುಗಳು ಎಂದು ತನಿಖೆಯಿಂದ ಸ್ಪಷ್ಟವಾಗಿದೆ.

ಅಂಬಲತ್ತರ ಪೊಲೀಸರು ಈ ಕುರಿತು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದು ಸುಳ್ಯದ ಸುಲೈಮನ್ ಹಾಗೂ ಪೆರಿಯಾ ನಿವಾಸಿ ಅಬ್ದುಲ್ ರಝಾಕ್ ಎಂಬವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಈ ಪ್ರಕರಣದಲ್ಲಿ ಪುತ್ತೂರಿನ ವ್ಯಕ್ತಿಯೋರ್ವನ ಕೈವಾಡ ಇರುವುದು ತನಿಖೆಯ ವೇಳೆ ಪೊಲೀಸರಿಗೆ ತಿಳಿದು ಬಂದಿದೆ. ಈ ವ್ಯಕ್ತಿಯೇ ಖೋಟಾ ನೋಟುಗಳನ್ನು ಈ ಇಬ್ಬರಿಗೆ ಸರಬರಾಜು ಮಾಡುತ್ತಿದ್ದ ಎನ್ನಲಾಗಿದೆ.

ಸುಮಾರು ವರ್ಷದಿಂದ ಅಬ್ದುರ್ ರಝಾಕ್ ಎಂಬುವರು ಈ ಮನೆಯನ್ನು ಬಾಡಿಗೆಗೆ ಪಡೆದು ವಾಸಿಸುತ್ತಿದ್ದರು. ಬಾಡಿಗೆಗೆ ಪಡೆದಿರುವ ಬಗ್ಗೆ ಸ್ಥಳೀಯ ನಿವಾಸಿಗಳಿಗೆ ಯಾವುದೇ ಮಾಹಿತಿ ಇಲ್ಲ. ಈತ ಐಷಾರಾಮಿ ಜೀವನ ನಡೆಸುತ್ತಿದ್ದ ಎಂದು ಇಲ್ಲಿನ ನಿವಾಸಿಗಳು ಹೇಳುತ್ತಾರೆ. ಈತನ ಬಗ್ಗೆ ಕೆಲವರಿಗೆ ಅನುಮಾನ ಬಂದಿದ್ದರಿಂದ ಪೊಲೀಸರಿಗೆ ಮಾಹಿತಿ ನೀಡಲಾಗಿತ್ತು.

ಸ್ಥಳೀಯರು ನೀಡಿದ ಮಾಹಿತಿ ಮೇರೆಗೆ ಪೊಲೀಸರು ಮನೆಯಲ್ಲಿ ಶೋಧ ನಡೆಸಿದಾಗ ನಿಷೇಧಿತ ನೋಟು ಪತ್ತೆಯಾಗಿದೆ. ಅಂಬಲತ್ತರ ಪೊಲೀಸ್ ಠಾಣೆ ಇನ್ ಸ್ಪೆಕ್ಟರ್ ಪ್ರತೀಶ್ ನೇತೃತ್ವದಲ್ಲಿ ಮನೆ ಮೇಲೆ ದಾಳಿ ನಡೆಸಿ ಹಣ ವಶಪಡಿಸಿ ಕೊಳ್ಳಲಾಗಿದೆ.

- Advertisement -

Related news

error: Content is protected !!