Monday, July 20, 2026
spot_imgspot_img
spot_imgspot_img

ನಟಿ ರುಕ್ಮಿಣಿ ವಸಂತ್‌ ಬಿಕಿನಿ ಫೋಟೋ ವೈರಲ್‌ ಪ್ರಕರಣ – ಕಿಡಿಗೇಡಿಗಳ ವಿರುದ್ಧ ಎಫ್‌ಐಆರ್ ದಾಖಲು

- Advertisement -
- Advertisement -

ಕಾಂತಾರ ನಟಿ ರುಕ್ಮಿಣಿ ವಸಂತ್‌ ಅವರು ಸಿನಿಮಾ ಒಂದರ ಚಿತ್ರೀಕರಣಕ್ಕೆ ಬಿಕಿನಿ ಧರಿಸಿದ್ದಾರೆ ಎನ್ನಲಾದ ಫೇಕ್ ವಿಡಿಯೋ ವೈರಲ್‌ ಮಾಡಿದವರ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ರುಕ್ಮಿಣಿ ವಸಂತ್‌ ನೀಡಿದ ದೂರಿನ ಮೇರೆಗೆ ಸೈಬರ್ ಕ್ರೈಮ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ದೂರಿನಲ್ಲಿ ಎಐ ತಂತ್ರಜ್ಞಾನ ಬಳಸಿ ನನ್ನ ಫೋಟೋವನ್ನು ಬಿಕಿನಿ ರೀತಿ ಸೃಷ್ಟಿ ಮಾಡಿದ್ದಾರೆ. ಡೀಪ್‌ಫೇಕ್ ತಂತ್ರಜ್ಞಾನ ಬಳಸಿ ಬೇರೆಯೊಬ್ಬರ ದೇಹಕ್ಕೆ ನನ್ನ ಮುಖವನ್ನು ಬಳಸಿದ್ದಾರೆ. ಈ ರೀತಿ ನಕಲಿ ವಿಡಿಯೋ ಮತ್ತು ಪೊಟೊವನ್ನು ಸೃಷ್ಟಿ ಮಾಡಿದ್ದಾರೆ. ನನ್ನ ಗೌರವಕ್ಕೆ ಧಕ್ಕೆ ತರುವ ಕೆಲಸ ಮಾಡಿದ್ದಾರೆ ಎಂದು ಉಲ್ಲೇಖಿಸಿದ್ದರು.

29 ಸಾಮಾಜಿಕ ಸೋಶಿಯಲ್‌ ಮೀಡಿಯಾ ಅಕೌಂಟ್ ವಿರುದ್ಧ ದೂರು ನೀಡಿದ್ದರು. 9 ಇನ್ಸ್ಟಾಗ್ರಾಂ ಅಕೌಂಟ್ , 14 ಎಕ್ಸ್‌ ಖಾತೆ, 6 ಫೇಸ್ ಬುಕ್ ಅಕೌಂಟ್‌ಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ದೂರು ದಾಖಲಾಗಿತ್ತು. ಇದೀಗ ಐಟಿ ಕಾಯ್ದೆ ಹಾಗೂ ಬಿಎನ್‌ಎಸ್‌ ಸೆಕ್ಷನ್‌ಗಳ ಅಡಿಯಲ್ಲಿ ಎಫ್‌ಐಆರ್‌ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ ಎಂದು ತಿಳಿದು ಬಂದಿದೆ.

- Advertisement -

Related news

error: Content is protected !!