Monday, August 10, 2026
spot_imgspot_img
spot_imgspot_img

ಶಾಂತಿ ಮಾತುಕತೆ ಬೆನ್ನಲ್ಲೇ ಉಕ್ರೇನ್ ಮೇಲೆ 273 ಕ್ಷಿಪಣಿಗಳಿಂದ ರಷ್ಯಾ ದಾಳಿ

- Advertisement -
- Advertisement -

ರಷ್ಯಾ ಮತ್ತು ಉಕ್ರೇನ್ ನಡುವೆ ಶಾಂತಿ ಮಾತುಕತೆ ನಡೆದಿರುವ ಬೆನ್ನಲ್ಲೇ, ಉಕ್ರೇನ್ನ ಪ್ರಮುಖ ಸ್ಥಳಗಳನ್ನು ಗುರಿಯಾಗಿಸಿ ರಷ್ಯಾ 273 ಕ್ಷಿಪಣಿಗಳನ್ನು ಉಡಾಯಿಸಿದೆ.

ಈ ಘಟನೆಯಲ್ಲಿ ಒಬ್ಬ ಮಹಿಳೆ ಮೃತಪಟ್ಟಿದ್ದು, ನಾಲ್ಕು ವರ್ಷದ ಮಗು ಸೇರಿದಂತೆ ಕನಿಷ್ಠ ಮೂವರು ಗಾಯಗೊಂಡಿದ್ದಾರೆ ಎಂದು ಉಕ್ರೇನ್ ಅಧಿಕಾರಿಗಳು ಭಾನುವಾರ ತಿಳಿಸಿದ್ದಾರೆ.ಕದನ ವಿರಾಮದ ನಿಟ್ಟಿನಲ್ಲಿ ರಷ್ಯಾ ಅಧ್ಯಕ್ಷ ಬ್ಲಾದಿಮಿರ್ ಪುಟಿನ್ ಮತ್ತು ಉಕ್ರೇನ್‌ ಅಧ್ಯಕ್ಷ ವೊಲೊಡಿಮಿರ್ ಝಲೆನ್‌ಸ್ಕಿ ಅವರೊಂದಿಗೆ ಸೋಮವಾರ ಮಾತುಕತೆ ನಡೆಸುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದರು. ಇದರ ಬೆನ್ನಲ್ಲೇ, ರಷ್ಯಾ ಡೋನ್ ದಾಳಿ ನಡೆಸಿದೆ.ಉಕ್ರೇನ್ ರಾಜಧಾನಿ ಕೀವ್ ಪ್ರಾಂತ್ಯ, ನಿಪ್ರೋಪೆಟ್ರೋವಸ್ಕ್ ಮತ್ತು ದೇಶದ ಪೂರ್ವಭಾಗದಲ್ಲಿರುವ ಡೊನೆಟ್‌ಸ್ಕ್ ಪ್ರಾಂತ್ಯಗಳನ್ನು ಗುರಿಯಾಗಿಸಿಕೊಂಡು ರಷ್ಯಾ 273 ಡೋನ್‌ಗಳನ್ನು ಉಡಾಯಿಸಿದೆ ಎಂದು ಉಕ್ರೇನ್ ವಾಯುಪಡೆ ತಿಳಿಸಿದೆ.

- Advertisement -

Related news

error: Content is protected !!