- Advertisement -
- Advertisement -
ಭಾರತೀಯ ಜನತಾ ಪಾರ್ಟಿ ಪುತ್ತೂರು ಗ್ರಾಮಾಂತರ ಮಂಡಲದ ವಿಟ್ಲ 3 ನೇ ಶಕ್ತಿಕೇಂದ್ರದ ಪ್ರಮುಖರಾಗಿ ಸದಾನಂದ ಗೌಡ ಸೇರಾಜೆ ಇವರನ್ನು ಭಾರತೀಯ ಜನತಾ ಪಾರ್ಟಿ ಪುತ್ತೂರು ಗ್ರಾಮಾಂತರ ಮಂಡಲದ ಅಧ್ಯಕ್ಷ ಶ್ರೀ ದಯಾನಂದ ಶೆಟ್ಟಿ ಉಜಿರೆಮಾರ್ ನೇಮಿಸಿದರು.
ಸದಾನಂದ ಗೌಡ ಸೇರಾಜೆಯವರು , ವಿಟ್ಲ ಬಿಜೆಪಿ ನಗರ ಸಮಿತಿಯ ಮಾಜಿ ಉಪಾಧ್ಯಕ್ಷರಾಗಿ, ಯುವಕ ಮಂಡಲ (ರಿ) ವಿಟ್ಲ ಸಮಿತಿಯ ಮಾಜಿ ಅಧ್ಯಕ್ಷರಾಗಿ, ಲಯನ್ಸ್ ಕ್ಲಬ್ ವಿಟ್ಲ ಸಿಟಿ ಹಾಗೂ ವಿಟ್ಲ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ನಿರ್ದೇಶಕರಾಗಿ, ಪಿಂಗಾರ ತೋಟಗಾರಿಕಾ ರೈತ ಉತ್ಪಾದಕ ಸಂಸ್ಥೆಯ ಮಾಜಿ ನಿರ್ದೇಶಕರಾಗಿ ಹಾಗೂ ವಿಟ್ಲ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಅಭಿವೃದ್ಧಿ ಸಮಿತಿಯ ಸದಸ್ಯರಾಗಿ ಸೇವೆ ಸಲ್ಲಿಸಿದವರು.
ಇದೀಗ ಭಾರತೀಯ ಜನತಾ ಪಾರ್ಟಿ ಪುತ್ತೂರು ಗ್ರಾಮಾಂತರ ಮಂಡಲದ ವಿಟ್ಲ 3 ನೇ ಶಕ್ತಿಕೇಂದ್ರದ ಪ್ರಮುಖರಾಗಿ ಸದಾನಂದ ಗೌಡ ಸೇರಾಜೆ ಆಯ್ಕೆಯಾಗಿದ್ದಾರೆ.
- Advertisement -